ನವದೆಹಲಿ: ಕರೊನಾ ಸೋಂಕಿಗೆ ಲಸಿಕೆ ಸಿದ್ಧಪಡಿಸುವಲ್ಲಿ ಭಾರತ ಉತ್ತಮ ಸ್ಫರ್ಧೆ ಕಾಯ್ದುಕೊಂಡಿದೆ. ಲಸಿಕೆ ತಯಾರಿಕಾ ಘಟಕಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ಭೇಟಿ ನೀಡಿದ ಬೆನ್ನಲ್ಲೇ ಇದೀಗ ಸಂಶೋಧಕರು ಮತ್ತು ವಿಜ್ಞಾನಿಗಳೊಂದಿಗೆ ಚರ್ಚೆ ನಡೆಸಿದ್ದಾರೆ.
ಇದನ್ನೂ ಓದಿ: ಸೀರಿಯಲ್ ಕಿಲ್ಲರ್ನೊಂದಿಗೇ ಬದುಕು! ದುರ್ವಾಸನೆ ಬರುತ್ತಿದ್ದ ಮನೆಯ ಬಾಗಿಲು ಒಡೆದವರಿಗೆ ಕಾದಿತ್ತು ಶಾಕ್
ಪುಣೆಯ ಜೆನ್ನೋವಾ ಬಯೋಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್, ಹೈದರಾಬಾದ್ನ ಬಯೋಲಾಕಿಲ್ ಇ ಲಿಮಿಟೆಡ್ ಮತ್ತು ಡಾ.ರೆಡ್ಡೀಸ್ ಲ್ಯಾಬೋರೇಟರಿಯ ತಂಡದೊಂದಿಗೆ ಪ್ರಧಾನಿ ಅವರು ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಲಸಿಕೆ ಸಿದ್ಧಪಡಿಸುವಿಕೆಯಲ್ಲಿ ಈ ತಂಡಗಳ ಕೊಡುಗೆಯನ್ನು ಪ್ರಶಂಸಿಸಿದ್ದಾರೆ.
ದೇಶದ ಪ್ರತಿಯೊಬ್ಬ ಸಾಮಾನ್ಯ ಪ್ರಜೆಗೂ ಕರೊನಾ ಲಸಿಕೆಯ ಬಗ್ಗೆ ಅರ್ಥವಾಗಬೇಕು. ಲಸಿಕೆ ಏನು, ಹೇಗೆ ಕೆಲಸ ಮಾಡುತ್ತದೆ, ಅದರ ಸಾಮರ್ಥ್ಯವೆಷ್ಟು ಎನ್ನುವುದರ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ರೀತಿಯಲ್ಲಿ ಸಂಶೋಧಕರು ವಿಶ್ಲೇಷಿಸಬೇಕು ಎಂದು ಪ್ರಧಾನಿ ಅವರು ಹೇಳಿದ್ದಾರೆ. ಈ ಸಮಯದಲ್ಲಿ ಲಸಿಕೆ ಅಭಿವೃದ್ಧಿಗೆ ವಿವಿಧ ವೇದಿಕೆಗಳ ಸಾಮರ್ಥ್ಯದ ಬಗ್ಗೆಯೂ ಚರ್ಚಿಸಲಾಗಿದೆ.
ದೇಶದಲ್ಲಿ ಲಸಿಕೆ ತಯಾರಿಕೆಯಲ್ಲಿ ಮುಂಚೂಣಿಯಲ್ಲಿರುವ ಮೂರು ಕೇಂದ್ರಗಳಿಗೆ ಮೋದಿಯವರು ಶನಿವಾರ ಭೇಟಿ ನೀಡಿದ್ದರು. ಪುಣೆಯ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ, ಅಹಮದಾಬಾದ್ನ ಜೈದಸ್ ಬಯೋಟೆಕ್ ಪಾರ್ಕ್ ಮತ್ತು ಹೈದರಾಬಾದ್ನ ಭಾರತ್ ಬಯೋಟೆಕ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. (ಏಜೆನ್ಸೀಸ್)