ನ್ಯೂಸ್

ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ: ಮಧು ಬಂಗಾರಪ್ಪ

ಬೆಂಗಳೂರು: ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆಯಾಗಲಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಸಂಪುಟದಲ್ಲಿ ಇಟ್ಟೇ ತೀರ್ಮಾನವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಸಂಪುಟದಲ್ಲಿ ಇಟ್ಟೇ ತೀರ್ಮಾನವಾಗಲಿದೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ. ಈ ಹಿಂದೆಯೂ ಸಪ್ಲಿಮೆಂಟರಿ ಪರಿಷ್ಕರಣೆ ಆಗಿದ್ದಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಒತ್ತಡ ಬೇಡ ಎಂದು ಹೇಳಿದ್ದಾರೆ.

ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ. ಇದು ಬಹಳ ಸೂಕ್ಷ್ಮ ವಿಚಾರವಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ‌. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಠ್ಯ ಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೇವು. ಅದನ್ನು ಮಾಡುತ್ತೇವೆ. ಈ ವಿಷಯದಲ್ಲಿ ಮುಖ್ಯಮಂತ್ರಿಯವರೇ ವಿಶೇಷ ಮುತುವರ್ಜಿ ವಹಿಸಿದ್ದಾರೆ. ಇದು ಖುಷಿಯ ವಿಚಾರ ಎಂದು ನುಡಿದಿದ್ದಾರೆ.

ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ. ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ ಎಂದಿದ್ದಾರೆ.

ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾತನಾಡಲಾಗುತ್ತದೆ‌. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಹೀಗಾಗಿ ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ‌ ಎಂದು ತಿಳಿಸಿದ್ದಾರೆ.