ಭೋಪಾಲ್: ದುಷ್ಕರ್ಮಿಗಳ ಗುಂಪೊಂದು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಾಯಿಯ ಬೆಲ್ಟ್ ಧರಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆಯನ್ನು ಹೊಡೆದು ಹಾಕುವಂತೆ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆದೇಶಿಸಿದ್ಧಾರೆ.
ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಚೌಹಾಣ್ ಪ್ರಕರಣ ಸಂಬಂಧ ಸಮೀರ್, ಸಾಜಿದ್, ಪೈಜಾನ್ ಲಾಲ್ರನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಅಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳ ಮನೆಯನ್ನು ಹೊಡೆದು ಹಾಕುವಂತೆ ಆದೇಶಿಸಿರುವ ಮುಖ್ಯಮಂತ್ರಿ ಚೌಹಾಣ್ ಪ್ರಕರಣದಲ್ಲಿ ಹೊಸ ಸಾಕ್ಷ್ಯಧಾರಗಳು ದೊರೆತಲ್ಲಿ NSA ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಘಟನೆಯ ಕುರಿತು ಪ್ರತಿಕ್ರಿಯಿಸಿದ್ಧಾರೆ.