ಮಧ್ಯಪ್ರದೇಶ: 108 ಅಡಿ ಎತ್ತರದ ಶಂಕರಾಚಾರ್ಯರ ಭವ್ಯ ಪ್ರತಿಮೆಯನ್ನು ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಇಂದು ಓಂಕಾರೇಶ್ವರದಲ್ಲಿ ಅನಾವರಣಗೊಳಿಸಿದರು.
ಓಂಕಾರೇಶ್ವರದಲ್ಲಿರುವ ಆದಿ ಶಂಕರಾಚಾರ್ಯರ ಭವ್ಯ ಪ್ರತಿಮೆಯನ್ನು ಉದ್ಘಾಟನೆ ಮಾಡಿದ ಶಿವರಾಜ್ ಸಿಂಗ್ ಚೌಹಾಣ್, ಸ್ಥಾಪನಾ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಪ್ರತಿಮೆ ಅನಾವರಣ ಸಮಾರಂಭ ವೀಕ್ಷಿಸಲು ಸಹಸ್ರಾರು ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು.
ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಚೌಹಣ್, “ಆದಿ ಗುರು ಶಂಕರಾಚಾರ್ಯ ಮಹಾರಾಜರು ದೇಶವನ್ನು ಸಾಂಸ್ಕೃತಿಕವಾಗಿ ಸಂಪರ್ಕಿಸಲು ಶ್ರಮಿಸಿದರು. ವೇದಗಳ ಸಾರವನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಅವರು ಮಾಡಿದರು. ದೇಶದ ನಾಲ್ಕು ಮೂಲೆಗಳಲ್ಲಿ ನಾಲ್ಕು ಮಠಗಳನ್ನೂ ಸ್ಥಾಪಿಸಿದರು. ಭಾರತವನ್ನು ಸಾಂಸ್ಕೃತಿಕವಾಗಿ ಒಗ್ಗೂಡಿಸಲು ಇದು ಕೆಲಸ ಮಾಡಿದೆ. ಆ ಕಾರಣದಿಂದ ಭಾರತ ಇಂದು ಒಗ್ಗಟ್ಟಾಗಿದೆ" ಎಂದು ಹೇಳಿದರು,(ಏಜೆನ್ಸೀಸ್).