ನ್ಯೂಸ್

ತನ್ನ ಜಮೀನಿನಲ್ಲಿ ನಿರ್ಮಿಸಿದ ದೇವಸ್ಥಾನಕ್ಕೆ ದಲಿತರಿಗೆ ಪ್ರವೇಶವಿಲ್ಲ ಎಂದು ನಾಮಫಲಕ ಹಾಕಿದ್ದ ವ್ಯಕ್ತಿ ಅರೆಸ್ಟ್​

ಮಧ್ಯಪ್ರದೇಶ: ಮಧ್ಯಪ್ರದೇಶದ ಧಾರ್ ಜಿಲ್ಲೆಯ ಹಳ್ಳಿಯೊಂದರಲ್ಲಿ ತನಗೆ ಸೇರಿದ ಜಮೀನಿನಲ್ಲಿ ನಿರ್ಮಿಸಲಾದ ದೇವಾಲಯಕ್ಕೆ ದಲಿತರಿಗೆ ಪ್ರವೇಶವಿಲ್ಲ ಎಂದು ಬೋರ್ಡ್ ಹಾಕಿದ್ದ ವ್ಯಕ್ತಿಯನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

"ಜಿಲ್ಲಾ ಕೇಂದ್ರದಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಕುಕ್ಷಿ ತಹಸಿಲ್ ವ್ಯಾಪ್ತಿಯ ಲೋಹ್ರಿ ಗ್ರಾಮದಲ್ಲಿ ಬುಧವಾರ ಈ ಘಟನೆ ನಡೆದಿದೆ. ಪ್ರಹ್ಲಾದ್ ವಿಶ್ವಕರ್ಮ ಎಂಬ ವ್ಯಕ್ತಿ ತನ್ನ ಜಮೀನಿನಲ್ಲಿ ದೇವಾಲಯವನ್ನು ನಿರ್ಮಿಸಿ, ಅದರ ಬಳಿ 'ದಲಿತರಿಗೆ ದೇವಸ್ಥಾನ ಪ್ರವೇಶಿಸುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ' ಎಂದು ನಾಮಫಲಕವನ್ನು ಹಾಕಿದ್ದರು" ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಾಟಿದಾರ್ ಹೇಳಿದರು.

"ವ್ಯಕ್ತಿ ಹಾಕಿದ್ದ ಬೋರ್ಡ್​ ಕಂಡು ವಿರೋಧ ವ್ಯಕ್ತಪಡಿಸಿದ ದಲಿತ ಸಮುದಾಯದ ಸದಸ್ಯರು ಮತ್ತು ಭೀಮ್ ಆರ್ಮಿ ಕಾರ್ಯಕರ್ತರು, ದೇವಸ್ಥಾನದ ಬಳಿ ಧರಣಿ ನಡೆಸಿದ್ದಾರೆ. ಶೀಘ್ರವೇ ಈ ಕುರಿತು ಮಾಹಿತಿ ಪಡೆದ ನಮ್ಮ ಕುಕ್ಷಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಸಂವಾದ ನಡೆಸಿ, ಶಾಂತಗೊಳಿಸಿದ್ದಾರೆ.

ವಿಶ್ವಕರ್ಮ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿ ಆತನನ್ನು ಬಂಧಿಸಲಾಗಿದೆ. ಘಟನೆಯ ನಂತರ ಆರೋಪಿ ತನ್ನ ತಪ್ಪನ್ನು ಅರಿತುಕೊಂಡು ಸಾರ್ವಜನಿಕವಾಗಿ ಕ್ಷಮೆಯಾಚಿಸಿ ಬೋರ್ಡ್ ತೆಗೆದುಹಾಕಿದ್ದಾನೆ" ಎಂದು ಪೊಲೀಸ್ ಅಧಿಕಾರಿ ಮಾಹಿತಿ ನೀಡಿದರು,(ಏಜೆನ್ಸೀಸ್).