ಚೆನ್ನೈ: ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಮನವಿಯ ಬಗ್ಗೆ ಏನು ಹೇಳುತ್ತೀರಿ ಎಂದು ಮದ್ರಾಸ್ ಹೈಕೋರ್ಟ್ ಕೇಂದ್ರ ಸರ್ಕಾರವನ್ನು ಕೇಳಿದೆ.
ಇದನ್ನೂ ಓದಿ: ‘ದೇವರ’ ನೋಡಿ ಸಾಯ್ತೀನಿ..ಅಲ್ಲಿವರೆಗೆ ಬದುಕಿಸಿ ಪ್ಲೀಸ್..! ಕಡೇ ಆಸೆ ಬಿಚ್ಚಿಟ್ಟ ಎನ್ಟಿಆರ್ ಅಭಿಮಾನಿ!
ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್‌ಟಿ ವ್ಯಾಪ್ತಿಗೆ ತರುವ ಕುರಿತು ಈ ವಿಚಾರದಲ್ಲಿ ಕಾರ್ಯಸಾಧ್ಯತೆಯ ಸಂಪೂರ್ಣ ವಿವರಗಳೊಂದಿಗೆ ಕೌಂಟರ್ ಅಫಿಡವಿಟ್ ಸಲ್ಲಿಸಲು ಆದೇಶಿಸಲಾಗಿದೆ.
ಮುಂದಿನ ವಿಚಾರಣೆಯನ್ನು ನಾಲ್ಕು ವಾರಗಳ ಕಾಲ ಮುಂದೂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಕೂಡ ಜಿಎಸ್‌ಟಿ ವ್ಯಾಪ್ತಿಗೆ ತಂದು ದೇಶಾದ್ಯಂತ ಅದೇ ಬೆಲೆಗೆ ಮಾರಾಟ ಮಾಡಬೇಕು ಎಂದು ಕೋರಿ ಹಿರಿಯ ವಕೀಲ ಕನಕರಾಜ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಪೀಠ ಈ ಆದೇಶ ನೀಡಿದೆ.