ನ್ಯೂಸ್

ದೇವೇಂದ್ರ ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ! ಬಿಜೆಪಿ ಸಭೆಯಲ್ಲಿ ನಿರ್ಧಾರ; ಅಧಿಕೃತ ಘೋಷಣೆಯೊಂದೆ ಬಾಕಿ.. | Maha CM

ಮುಂಬೈ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಕೂಟ ಅಧಿಕಾರಕ್ಕೆ ಬಂದ ಬಳಿಕ(Maha CM) ಸಿಎಂ ಯಾರಾಗಲಿದ್ದಾರೆ ಎಂಬ ಬಹುದಿಗಳ ಚರ್ಚೆಗೆ ಕೊನೆಗೂ ತೆರೆ ಎಳೆದಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವೀಸ್​ ನಾಳೆ(ಡಿ.05) ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುಹುದು ಬಹತೇಕ ಖಚಿತವಾಗಿದೆ.

ಇಂದು(ಡಿ.04)ರಂದು ಮುಂಬೈನಲ್ಲಿ ನಡೆದ ಬಿಜೆಪಿ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫಡ್ನವಿಸ್​ ಬಹುತೇಕ ಸಿಎಂ ಆಗಲಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಇದೆ ಎಂದು ವರದಿಗಳು ಉಲ್ಲೇಖಿಸಿವೆ.

ಇನ್ನು ಸಭೆಯಲ್ಲಿ ಮಹಾಯುತಿ ಕೂಟದ ಎಲ್ಲಾ ನಾಯಕರು ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ಫಡ್ನವಿಸ್​ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಶಿಂಧೆ ಮತ್ತು ಅಜಿತ್​ ಏಕನಾಥ್ ಶಿಂಧೆ ಮತ್ತು ಎನ್​ಸಿಪಿ ನಾಯಕ ಅಜಿತ್​ ಪವಾರ್​ ಉಪ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಮುಂಬೈನ ಅಜಾದ್​ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಹತೇಕ ನಾಯಕರು ಮತ್ತು ಎನ್​ಡಿಎ ನಾಯಕರು ಪಾಲ್ಗೋಳಲಿದ್ದಾರೆ ಎಂದು ಮಹಾರಾಷ್ಟ್ರದ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್​ ಬವಾಂಕುಲೆ ತಿಳಿಸಿದ್ದಾರೆ.(ಏಜೆನ್ಸೀಸ್​).