Maha Kumbh Stampede: ಇಂದು ಮೌನಿ ಅಮಾವಾಸ್ಯೆಯ ಹಿನ್ನಲೆ ಮಹಾಕುಂಭ ಮೇಳದ ತ್ರಿವೇಣಿ ಸಂಗಮದಲ್ಲಿ ಅಮೃತ ಸ್ನಾನಕ್ಕೆ ಭಕ್ತಾಧಿಗಳು ಮುಗಿಬಿದ್ದಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 25ರಿಂದ 30 ಮಹಿಳೆಯರು ಉಸಿರಾಟ ತೊಂದರೆಯಿಂದ ನಿಂತಲ್ಲೇ ಕುಸಿದು ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೂ ಕಾಲ್ತುಳಿತದಲ್ಲಿ 10ಕ್ಕೂ ಅಧಿಕ ಸಂಖ್ಯೆಯ ಭಕ್ತರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ಬೆಂಗಳೂರು ಬುಲ್ಸ್ ನೂತನ ಕೋಚ್ ಆಗಿ ಅರ್ಜುನ ಪ್ರಶಸ್ತಿ ಹಾಗೂ ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಕನ್ನಡಿಗ ನೇಮಕ!
ಸುಮಾರು 10 ಕೋಟಿ ಭಕ್ತಾಧಿಗಳು ಅಮೃತ ಸ್ನಾನಕ್ಕಾಗಿ ತ್ರಿವೇಣಿ ಸಂಗಮಕ್ಕೆ ಭೇಟಿ ಕೊಡಲಿದ್ದಾರೆ ಎಂಬುದು ಆಡಳಿತ ಮಂಡಳಿಗೆ ಮಾಹಿತಿ ಇತ್ತು. ಈ ಹಿನ್ನೆಲೆ ಹಲವು ರೀತಿಯಲ್ಲಿ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿತ್ತು. ಆದರೆ, ನಿರೀಕ್ಷೆಗೂ ಮೀರಿದ ಸಂಖ್ಯೆಯಲ್ಲಿ ಭಕ್ತಸಾಗರ ಹರಿದುಬಂದ ಕಾರಣ ಸಂಗಮದಲ್ಲಿ ಕಾಲ್ತುಳಿತ ಸಂಭವಿಸಿದೆ. ಈ ಘಟನೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾಲ್ತುಳಿತ ಸಂಭವಿಸಿದ ಬೆನ್ನಲ್ಲೇ ಮಾಹಿತಿ ಪಡೆದ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ದೂರವಾಣಿಯಲ್ಲಿ ಪರಿಸ್ಥಿತಿ ಬಗ್ಗೆ ವಿಚಾರಿಸಿ, ತಕ್ಷಣದ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಗ್ರಾಮಸಭೆಗೆ ಅಽಕಾರಿಗಳು ಗೈರು – ಕಾಟಾಚಾರಕ್ಕೆ ಕಾರ್ಯಕ್ರಮ ನಡೆಸಲು ಬಿಡದ ಮಕ್ಕಳು – ಕಾದರೂ ಬಾರದಾಗ ಮುಂದೂಡಿಕೆ
ಕಾಲ್ತುಳಿತ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡ ಭಕ್ತರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಿ, ಹೆಚ್ಚಿನ ಚಿಕಿತ್ಸೆ ಕೊಡಿಸಲಾಗಿದೆ,(ಏಜೆನ್ಸೀಸ್).