ನ್ಯೂಸ್

ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಆಗಮಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ!

ಅಹ್ಮದ್​ನಗರ (ಮಹಾರಾಷ್ಟ್ರ): ಚುನಾವಣೆಗು ಮುನ್ನ ಮತದಾರರನ್ನು ಸೆಳೆಯಲು ಜನಪ್ರತಿನಿಧಿಗಳು ನಾನಾ ಪ್ರಯತ್ನ ಮಾಡುತ್ತಾರೆ. ಗೆಲುವು ಸಾಧಿಸಿದ ಬಳಿಕವು ಡಿಜೆ ಸೌಂಡ್, ಮೆರವಣಿಗೆಯಂತಹ ಸಂಭ್ರಮಾಚರಣೆ ಮಾಡುತ್ತಾರೆ. ಈ ರೀತಿ ಶಾಸಕ ಅಥವಾ ಸಂಸದರ ಚುನಾವಣೆಯಲ್ಲಿ ಸಾಮಾನ್ಯವಾಗಿ ನೋಡಿರುತ್ತೇವೆ. ಆದರೆ, ಇಲ್ಲೊಬ್ಬ ಗ್ರಾಮ ಪಂಚಾಯಿತಿ ಸದಸ್ಯ ಪ್ರಮಾಣ ವಚನ ಸ್ವೀಕರಿಸಲು ಹೆಲಿಕಾಪ್ಟರ್​ನಲ್ಲಿ ಬರುವ ಮೂಲಕ ಎಲ್ಲರ ಹುಬ್ಬೇರಿಸಿದ್ದಾರೆ.

ಮಹಾರಾಷ್ಟ್ರದ ಅಹ್ಮದ್​ನಗರ ಜಿಲ್ಲೆಯ ಅಂಬಿ-ದುಮಾಲಾ ಗ್ರಾಮದಲ್ಲಿ ಹೊಸದಾಗಿ ಆಯ್ಕೆಯಾದ ಗ್ರಾಮ ಪಂಚಾಯಿತಿ ಅಧ್ಯಕ್ಷ, ಪ್ರಮಾಣ ವಚನ ಸ್ವೀಕರಿಸಲು ಫೆ. 12ರಂದು ಹೆಲಿಕಾಪ್ಟರ್​ನಲ್ಲಿ ಆಗಮಿಸಿದರು. ಉದ್ಯಮಿ ಆಗಿರುವ ಜಲಿಂದರ್​ ಗಾಗರೆ (50) ಪುಣೆಯಲ್ಲಿ ಕಂಪನಿಯನ್ನು ಹೊಂದಿದ್ದಾರೆ.

ಹೆಲಿಕಾಪ್ಟರ್​ ಅನ್ನು ಬುಕ್​​ ಮಾಡಿದ ಜಲಿಂದರ್​, ಪುಣೆಯಿಂದ ಹಳ್ಳಿಗೆ ತೆರಳಿದ್ದಾರೆ. ಬಳಿಕ 12 ಎತ್ತಿನ ಗಾಡಿಗಳಿಂದ ಗ್ರಾಮ ಪಂಚಾಯಿತಿಗೆ ಮೆರವಣಿಗೆ ಹೋಗಿ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಮಾತನಾಡಿದ ಅವರು ಗ್ರಾಮದ ಅಬಿವೃದ್ಧಿಗಾಗಿ ಚುನಾವಣೆಗೆ ಸ್ಪರ್ಧಿಸಿದ್ದಾಗಿ ತಿಳಿಸಿದರು. (ಏಜೆನ್ಸೀಸ್​)