ಜೈಪುರ: ಲಾರಿ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 03 ಮಂದಿ ಮೃತಪಟ್ಟು, 06 ಮಂದಿ ಗಂಭೀರವಾಗು ಗಾಯಗೊಂಡಿರುವ ಘಟನೆ ರಾಜಸ್ಥಾನದ ಬರಾನ್ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಮಹಾಕುಂಭಮೇಳದಿಂದ (Mahakumbh Mela) ವಾಪಸ್ ಆಗುತ್ತಿದ್ದಾಗ ಕ್ರೂಸರ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಭರತ್ (45), ಜಗದೀಶ್ (40) ಹಾಗೂ ಅಮೃತ್ ಬಾಯಿ ಎಂದು ಗುರುತಿಸಲಾಗಿದೆ.
ಅಪಘಾತದ ಕುರಿತು ಮಾಹಿತಿ ನೀಡಿರುವ ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು, ಮಹಾಕುಂಭಮೇಳಕ್ಕೆ ತೆರಳಿ ವಾಪಸ್ ಆಗುತ್ತಿದ್ದಾಗ ಜಿಲ್ಲೆಯ ಶಹಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿ ಹೊಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೋಟಾಗೆ ಸ್ಥಳಾಂತರಿಸಲಾಗಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.