ನ್ಯೂಸ್

ಮಹಾರಾಷ್ಟ್ರ ಚುನಾವಣೆ; ರಾಜ್ಯದ ಅರ್ಹ ಮತದಾರರಿಗೆ ವೇತನ ಸಹಿತ ರಜೆ|Leave with pay for eligible voters

ಬೆಂಗಳೂರು: ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಜಿಲ್ಲೆಗಳಲ್ಲಿರುವ ಅರ್ಹ ಮತದಾರರಿಗೆ ವೇತನ ಸಹಿತ ರಜೆ(Leave with pay for eligible voters of the state) ನೀಡಲು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ನ.20 ರಂದು ಮಹಾರಾಷ್ಟ್ರ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಗಡಿ ಜಿಲ್ಲೆಗಳಾದ ಬೀದರ್, ವಿಜಯಪುರ, ಬೆಳಗಾವಿ, ಕಲಬುರಗಿ ಜಿಲ್ಲೆಗಳಲ್ಲಿನ ರಾಜ್ಯ ಸರ್ಕಾರಿ ಕಚೇರಿ(ಅನುದಾನಿತ ಶಿಕ್ಷಣ ಸಂಸ್ಥೆ ಒಳಗೊಂಡು), ರಾಷ್ಟ್ರೀಕೃತ ಬ್ಯಾಂಕ್‌ಗಳು, ಜೀವ ವಿಮಾ ನಿಗಮ, ಹಣಕಾಸು ಂಸ್ಥೆಗಳು ಹಾಗೂ ಇನ್ನಿತರ ಔದ್ಯಮಿಕ ಸಂಸ್ಥೆಗಳಲ್ಲಿ ಕಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಮಹಾರಾಷ್ಟ್ರ ರಾಜ್ಯದ ಅರ್ಹ ಮತದಾರರಿಗೆ ಮಾತ್ರ ಸೀಮಿತವಾಗಿ ಮತದಾನ ಮಾಡಲು ಅನುಕೂಲವಾಗುವಂತೆ ಒಂದು ದಿನದ ವೇತನ ಸಹಿತ ರಜೆ ಮಂಜೂರು ಮಾಡಲು ಮಂಜೂರು ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.