ಮುಂಬೈ: ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಭಾರೀ ಹಿನ್ನಡೆ ಕಂಡಿದ್ದ ಎನ್ಡಿಎ ಮೈತ್ರಿಕೂಟ ಸರ್ಕಾರ ಈ ಬಾರಿಯ ರಾಜ್ಯ ಬಜೆಟ್ನಲ್ಲಿ ಜನಪ್ರಿಯ ಸ್ಕೀಮ್ಗಳಿಗೆ ಶರಣಾಗಿದೆ. ಇದರಂತೆ ಪೆಟ್ರೋಲ್ ಮತ್ತು ಡೀಸಲ್ ಮೇಲಿನ ತೆರಿಗೆಯನ್ನು ಮಹಾರಾಷ್ಟ್ರ ಸರ್ಕಾರ ಇದೇ ವೇಳೆ ಇಳಿಕೆ ಮಾಡಿ ಜನಸಾಮಾನ್ಯರಿಗೆ ಖುಷಿಯ ಸುದ್ದಿ ನೀಡಿದ್ದಾರೆ.
ಡೀಸೆಲ್ ಮೇಲಿದ್ದ 24% ತೆರಿಗೆಯನ್ನು 21% ಇಳಿಕೆ ಮಾಡಿದ್ದು, ಪ್ರತಿ ಲೀಟರ್ ಡೀಸೆಲ್ ಬೆಲೆ 2 ರೂ. ಇಳಿಕೆಯಾಗಲಿದೆ. ಪೆಟ್ರೋಲ್ ಮೇಲಿದ್ದ 26% ತೆರಿಗೆಯನ್ನು 25% ಇಳಿಕೆ ಮಾಡಿದ್ದು, ಪ್ರತಿ ಲೀಟರ್ ಪೆಟ್ರೋಲ್ ಬೆಲೆ 65 ಪೈಸೆ ಇಳಿಸಲಾಗಿದೆ. ಇದರೊಂದಿಗೆ ಮುಂಬೈನಲ್ಲಿ ಪೆಟ್ರೋಲ್ ಬೆಲೆ 65 ಪೈಸೆ ಇಳಿಕೆ ಆದರೆ, ಡೀಸಲ್ ಬೆಲೆ ಎರಡು ರೂನಷ್ಟು ತಗ್ಗಲಿದೆ.
ಪ್ರಸ್ತುತ ಮುಂಬಯಿಯಲ್ಲಿ ಪೆಟ್ರೋಲ್ ದರ ಲೀಟರ್ಗೆ 104.21 ರೂ ಇದೆ. ಡೀಸಲ್ ಬೆಲೆ ಲೀಟರ್ಗೆ 92.15 ರೂ ಇದೆ.