ಬುಲ್ಧಾನ: ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಆರು ಜನರು ಮೃತಪಟ್ಟು, ಹಲವರು ಗಂಭೀರವಾಗಿರುವ ಘಟನೆ ಮಹಾರಾಷ್ಟ್ರದ ಬುಲ್ಧಾನದಲ್ಲಿ ನಡೆದಿದೆ.
ಇದನ್ನೂ ಓದಿ: ನಿನ್ನೆ 46 ಇಂದು 100 ತಹಸೀಲ್ದಾರ್ಗಳ ವರ್ಗಾವಣೆ: ಯಾರು, ಎಲ್ಲಿಗೆ? ಇಲ್ಲಿದೆ ಸಂಪೂರ್ಣ ಪಟ್ಟಿ….
ಮೃತರ ಗುರುತು ಇನ್ನು ಪತ್ತೆಯಾಗಿಲ್ಲ. ಮಲ್ಕಾಪುರ ಪಟ್ಟಣದ ನಂದೂರ್ ನಾಕಾ ಮೇಲ್ಸೇತುವೆಯಲ್ಲಿ ಮುಂಜಾನೆ 2.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎನ್ನಲಾಗಿದ್ದು, ಒಂದು ಬಸ್ ಅಮರನಾಥ ಯಾತ್ರೆಯಿಂದ ಹಿಂಗೋಲಿ ಜಿಲ್ಲೆಗೆ ಹಿಂತಿರುಗುತ್ತಿತ್ತು. ಇನ್ನೊಂದು ನಾಸಿಕ್ಗೆ ಹೋಗುತ್ತಿತ್ತು. ನಾಸಿಕ್ ಕಡೆಗೆ ಹೋಗುತ್ತಿದ್ದ ಬಸ್ಸು ಟ್ರಕ್ನ್ನು ಹಿಂದಿಕ್ಕಲು ಯತ್ನಿಸಿದ ವೇಳೆ ಎದುರಿಗೆ ಬಂದ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಪರಿಣಾಮವಾಗಿ ಎರಡು ಬಸ್ಗಳು ನಜ್ಜುಗುಜ್ಜಾಗಿದ್ದು, ನಾಲ್ಕೈದು ಜನರ ಸ್ಥಿತಿ ಚಿಂತಾಜನಕವಾಗಿದೆ. ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರು ಮೃತಪಟ್ಟು 20 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ನಾಲ್ಕೈದು ಜನರ ಸ್ಥಿತಿ ಚಿಂತಾಜನಕವಾಗಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡ ಅಪಘಾತದ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್)