ವಿಟ್ಲ: ಮಕ್ಕಳು ಆರೋಗ್ಯದಿಂದ ಇರಬೇಕೆಂಬ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಯನ್ನು ಹಾಕಿಕೊಂಡಿದೆ. ಎನ್.ಆರ್.ಎಚ್.ಎಂ ಕಾರ್ಯಕ್ರಮದ ಮೂಲಕ ಮಹಿಳೆಯರಿಗೆ ಸ್ವಾವಲಂಬನೆಯ ಬದುಕನ್ನು ನೀಡಲಾಗಿದೆ. ಹೆಣ್ಣುಮಕ್ಕಳು ಅಡುಗೆ ಕೋಣೆಯನ್ನು ಬಿಟ್ಟು ಹೊರಗೆ ಬರುವ ರೀತಿಯ ಪರಿವರ್ತನೆಯಾಗಿದೆ. ಜಾಗೃತ ಸಮಾಜದಲ್ಲಿ ಮಾಹಿತಿಯನ್ನು ತಿಳಿದುಕೊಳ್ಳುವ ಕಾರ್ಯ ಪ್ರತಿಯೊಬ್ಬರಿಂದ ನಡೆಯುತ್ತಿದೆ ಎಂದು ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷೆ ಮಮತಾ ಗಟ್ಟಿ ಹೇಳಿದರು.
ಅಳಿಕೆ ಗ್ರಾಮ ಪಂಚಾಯಿತಿ ಬಾಪೂಜಿ ಸಭಾಭವನದಲ್ಲಿ ಗ್ರಾಮ ಪಂಚಾಯಿತಿ ಮತ್ತು ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ನಡೆದ ವಲಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಮಹಿಳಾ ಗ್ರಾಮಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ಅಂಗನವಾಡಿ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಕ್ಕಳಿಗೆ ಹಾಗೂ ಸ್ತ್ರೀಶಕ್ತಿ ಸಂಘದ ಸದಸ್ಯರಿಗೆ ನಡೆದ ಆಟೋಟದ ಬಹುಮಾನ ವಿತರಣೆ ನಡೆಯಿತು. ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ತಿಮ್ಮಪ್ಪ ನಾಯ್ಕ ಬೀಮಾವರ ಅವರನ್ನು ಸನ್ಮಾನಿಸಲಾಯಿತು. ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಧ್ಯಕ್ಷತೆ ವಹಿಸಿದ್ದರು.
ಅಳಿಕೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಽಕಾರಿ ಡಾ.ಜಯಪ್ರಕಾಶ್, ವಿಠಲ ಪ್ರೌಢಶಾಲೆ ನಿವೃತ್ತ ಶಿಕ್ಷಕ ಸಂಕಪ್ಪ ಗೌಡ, ಶಿಶು ಅಭಿವೃದ್ಧಿ ಪ್ರಭಾರ ಯೋಜನಾಽಕಾರಿ ಮಮ್ತಾಝ್ ಎಚ್. ಐ., ಪಂಚಾಯಿತಿ ಉಪಾಧ್ಯಕ್ಷೆ ಸರೋಜಿನಿ, ಸದಸ್ಯರಾದ ಜಗದೀಶ್ ಶೆಟ್ಟಿ, ಸೀತಾರಾಮ ಶೆಟ್ಟಿ, ಕಾನ ಈಶ್ವರ ಭಟ್, ಸುಕುಮಾರ, ರವೀಶ ಕೆ., ಶಾಂಭವಿ, ಸರಸ್ವತಿ, ಭಾಗೀರಥಿ, ಶಶಿಕಲಾ, ಗಿರಿಜ, ಅಭಿವೃದ್ಧಿ ಅಽಕಾರಿ ಧನಂಜಯ ಮತ್ತಿತರರು ಉಪಸ್ಥಿತರಿದ್ದರು.
ವಿಟ್ಲ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರೋಹಿಣಿ ಸ್ವಾಗತಿಸಿದರು. ಪಂಚಾಯಿತಿ ಸದಸ್ಯ ಸದಾಶಿವ ಶೆಟ್ಟಿ ಮಡಿಯಾಲ ವಂದಿಸಿದರು. ಎರುಂಬು ಅಂಗನವಾಡಿ ಕಾರ್ಯಕರ್ತೆ ಸವಿತಾ ಕಾರ್ಯಕ್ರಮ ನಿರೂಪಿಸಿದರು.