ನ್ಯೂಸ್

ರಾಮೇಶ್ವರಂ ಕೆಫೆ ಬ್ಲಾಸ್ಟ್​ ಪ್ರಕರಣ; ಪೊಲೀಸರಿಗೆ ಯಾಮಾರಿಸಲು ಬಟ್ಟೆ ಬದಲಿಸಿ ಹೋದ ಶಂಕಿತ

ಬೆಂಗಳೂರು: ನಗರದ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ್ದ ಸ್ಫೋಟಕ್ಕೆ ಸಂಬಂಧಿಸಿದಂತೆ ಬಾಂಬ್​ ಸ್ಫೋಟ ಪ್ರಕರಣ ಕ್ಷಣಕ್ಷಣಕ್ಕೂ ಹೊಸ ಟ್ವಿಸ್ಟ್​ ಪಡೆಯುತ್ತಿದ್ದು, ಕೆಫೆಯಲ್ಲಿ ಬಾಂಬ್ ಇಟ್ಟ ಬಳಿಕ ಆರೋಪಿ ಶರ್ಟ್ ಮತ್ತು ಮತ್ತು ಪ್ಯಾಂಟ್ ಬದಲಿಸಿ ಹೋಗಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

ರಾಂಏಶ್ವರಂ ಕೆಫೆಯಲ್ಲಿ ಬಾಂಬ್​ ಇಟ್ಟ ಬಳಿಕ ಆರೋಪಿ ದಾರಿ ಮಧ್ಯೆ ಬಟ್ಟೆ ಬದಲಿಸಿ ಹೋಗಿರುವ ಬಗ್ಗೆ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದ್ದು, ಶರ್ಟ್ ಮೇಲೆ ಶರ್ಟ್, ಪ್ಯಾಂಟ್ ಮೇಲೆ ಪ್ಯಾಂಟ್ ಹಾಕಿಕೊಂಡು ತೆರಳಿರುವ ಬಗ್ಗೆ ತಿಳಿದು ಬಂದಿದೆ.

ಇದಲ್ಲದೆ ಆರೋಪಿ 3-4 ಬಸ್ ಬದಲಿಸಿ ಪ್ರಯಾಣ ಮಾಡಿರುವ ಬಗ್ಗೆ ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದು, ಹೊರರಾಜ್ಯಕ್ಕೆ ಎಸ್ಕೇಪ್ ಆಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ. ಸಿಸಿಟಿವಿಯಲ್ಲಿ ಆತ ಯಾರೊಂದಿಗೂ ಫೋನಿನಲ್ಲಿ ಮಾತನಾಡುತ್ತಿರುವ ದೃಶ್ಯ ಸೆರೆಯಾಗಿತ್ತು. ಆದರೆ ತನಿಖೆಗೆ ಇಳಿದಾಗ ಆತ ಡಮ್ಮಿ ಫೋನ್ ಅನ್ನು ಬಳಸಿರುವ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಘಟನೆ ನಡೆದು 48 ಘಟನೆಗಳಾಗುತ್ತ ಬಂದರೂ ಈವರೆಗೂ ಶಂಕಿತನನ್ನು ಬಂಧಿಸದೆ ಇರುವುದು ವಿಪಕ್ಷಗಳು ಹಾಗೂ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. 200 ಅಧಿಕಾರಿಗಳು ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದು, ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ.