ಭೋಪಾಲ್: ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸುವುದನ್ನು ಕಡ್ಡಾಯ ಮಾಡಬೇಕು ಎಂದು ಮಧ್ಯಪ್ರದೇಶ ಬಿಜೆಪಿ ಶಾಸಕ ರಮೇಶ್ ಮೆಂದೋಲ್ ಅವರು ಶನಿವಾರ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನಲ್ಲೇ 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮನೆಗೇ ವಿಡಿಯೋ ಕಳಿಸಿ ಬ್ಲಾಕ್ಮೇಲ್
ಉತ್ತರ ಪ್ರದೇಶ ಸರ್ಕಾರವು ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಹೋಟೆಲ್, ರೆಸ್ಟೋರೆಂಟ್ ಮತ್ತಿತರ ಆಹಾರ ಅಂಗಡಿಗಳ ಮುಂದೆ ಮಾಲೀಕರ ಹೆಸರುಗಳನ್ನು ಪ್ರದರ್ಶಿಸಬೇಕು ಎಂದು ಆದೇಶಿಸಿದ್ದು ವಿವಾದಾತ್ಮಾಕ ಸ್ವರೂಪ ಪಡೆದಿದೆ. ಈ ನಡುವಯೇ ಮೆಂದೋಲಾ ಅವರ ಈ ಮನವಿ ಮಾಡಿದ್ದಾರೆ.
ಯಾವುದೇ ವ್ಯಕ್ತಿಯ ಹೆಸರು, ಅವರ ಗುರುತು, ಅವರ ಹೆಸರಿನ ಬಗ್ಗೆ ಹೆಮ್ಮೆ ಇರಬೇಕು. ಅವರ ಹೆಸರನ್ನು ಕೇಳುವುದು ಗ್ರಾಹಕರ ಹಕ್ಕು. ರಾಜ್ಯದಲ್ಲಿ ಈ ಸಂಬಂಧ ಕಾನೂನು ಜಾರಿ ಮಾಡಲು ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಇಂದೋರ್-2 ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಹೇಳಿದ್ದಾರೆ.
ನಾಲ್ಕು ಬಾರಿ ಶಾಸಕರಾಗಿರುವ ಮೆಂಡೋಲಾ, ಮಧ್ಯಪ್ರದೇಶದ ಪ್ರತಿಯೊಬ್ಬ ಸಣ್ಣ ಮತ್ತು ದೊಡ್ಡ ವ್ಯಾಪಾರಿಗಳು, ಎಲ್ಲಾ ಉದ್ಯಮಿಗಳು ಮತ್ತು ಅಂಗಡಿಯವರು ತಮ್ಮ ಹೆಸರನ್ನು ಹೇಳುವಲ್ಲಿ ಈ ಹೆಮ್ಮೆಯ ಭಾವವನ್ನು ಅನುಭವಿಸಬಹುದು ಎಂದು ಹೇಳಿದ್ದಾರೆ.