ಮಂಡ್ಯ: ಶ್ರೀ ಶ್ರೀ ಶ್ರೀ ಮಲೈ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವವನ್ನು ರಾಜ್ಯಸಭಾ ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಉದ್ಘಾಟನೆ ಮಾಡಿದರು.
ನಾವು ಕೃತಜ್ಞತೆ ಸಲ್ಲಿಸವುದಕ್ಕಾಗಿ ಪೂಜೆ ನಡೆಸುತ್ತೇವೆ. ಪಂಚ ಭೂತಗಳಲ್ಲಿ ಜಲ ಬಹಳ ಮುಖ್ಯವಾದದ್ದು. ಜಲಕ್ಕೆ ನಾವು ಕೃತಜ್ಞತೆ ಹೇಳುವುದು ಹೇಗೆ. ನಮ್ಮ ಬದುಕಿನ ಅವಿಭಾಜ್ಯ ಅಂಗವಾಗಿರೊ ತಾಯಿಗೆ ಕೃತಜ್ಞತೆ ಸಲ್ಲಿಸಬೇಕಿದೆ. ಇಷ್ಟು ವರ್ಷ ನಮಗೆ ನೀರಿನ ಅಭವಾ ಉಂಟಾಗಿತ್ತು. ಈಗ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಅದನ್ನು ಹೇಗೆ ಬಳಕೆ ಮಾಡಬೇಕೆಂಬದನ್ನು ಕಲಿಯಬೇಕು. ಜಲವನ್ನು ಎಚ್ಚರಿಕಯಿಂದ ಅಮೂಲ್ಯ ಎಂದು ಬಳಸಬೇಕು. ಕೃಷಿಗೆ, ಅಡುಗೆಗೆ ಸ್ನಾನ ಸೇರಿದಂತೆ ಎಲ್ಲೆಲ್ಲೂ ನೀರನ್ನ ಮಿತವಾಗಿ ಬಳಸಿ ಎಂದು ಹೇಳುವ ಮೂಲಕ ನೀರಿನ ನಿರ್ವಹಣೆ ಬಗೆಗೆ ಜನ ಜಾಗೃತಿ ವಹಿಸಬೇಕು ಎಂದು ಡಾ.ಡಿ ವೀರೇಂದ್ರ ಹೆಗ್ಗಡೆ ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಶ್ರೀರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಸ್ವಾಮಿ ಮುಕ್ತಿದಾನಂದ ಜೀ ಮಹಾರಾಜ್, ಕಾಗಿನೆಲೆ ಕನಕಗುರು ಪೀಠ ಶ್ರೀ ಶ್ರೀ ಶಿವಾನಂದಪುರಿ ಸ್ವಾಮೀಜಿ, ಬೇಬಿ ಮಠ ಮತ್ತು ಚಂದ್ರವನ ಆಶ್ರಮ ಶ್ರೀ ಶ್ರೀ ಡಾ.ತ್ರಿನೇತ್ರ ಮಹಂತ ಶಿವಯೋಗಿ ಸ್ವಾಮೀಜಿ, ಶ್ರೀ ಮಲೆ ಮಹದೇಶ್ವರ ಬೆಟ್ಟ ಸುಕ್ಷೇತ್ರ ಶ್ರೀ ಸಾಲೂರು ಬೃಹನ್ಮಠ ಪೀಠಾಧ್ಯಕ್ಷರಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಅಬಕಾರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ರೇಷ್ಮೆ, ಯುವಸಬಲೀಕರಣ ಹಾಗೂ ಕ್ರೀಡಾ ಸಚಿವ ಡಾ.ನಾರಾಯಣ ಗೌಡ, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್ ಅಶ್ವಥ್ ನಾರಾಯಣ್, ಮುಜರಾಯಿ ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ, ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ. ಸಿಇಒ ಶಾಂತ ಎಲ್. ಹುಲ್ಮನಿ, ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಉಪವಿಭಾಗಾಧಿಕಾರಿ ಬಿ.ಸಿ ಶಿವಾನಂದಮೂರ್ತಿ, ತಹಶೀಲ್ದಾರ್ ರೂಪ, ಸಣ್ಣ ಸ್ವಾಮಿಗೌಡ ಸೇರಿದಂತೆ ಇತರರು ಉಪಸ್ಥಿತರಿದ್ದರು.