ನ್ಯೂಸ್

ಮಲಯಾಳಂ ನಟ ಜಯಕೃಷ್ಣನ್ ಬಂಧನ! Malayalam actor Jayakrishnan..

Malayalam actor Jayakrishnan  : ಮಂಗಳೂರಿನಲ್ಲಿ ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಆರೋಪ ಅವರ ಮೇಲೆ  ಕೇರಳ ಚಿತ್ರರಂಗದ ನಟ ಜಯಕೃಷ್ಣನ್ ಬಂಧನ ಆಗಿದೆ.

ಮಂಗಳೂರಿನಲ್ಲಿ ಮುಸ್ಲಿಂ ಕ್ಯಾಬ್ ಚಾಲಕನ ಮೇಲೆ ಕೋಮು ಮತ್ತು ನಿಂದನೀಯ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಕೇರಳ ಮೂಲದ ಮೂವರು ಮಲಯಾಳಂ ನಟ ಜಯಕೃಷ್ಣನ್, ಸಂತೋಷ್ ಅಬ್ರಹಾಂ ಮತ್ತು ವಿಮಲ್ ವಿರುದ್ಧ ಉರ್ವಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಯಕೃಷ್ಣನ್ ಸೇರಿ ಮೂವರ ಮೇಲೆ ದೂರು ದಾಖಲು ಮಾಡಲಾಗಿತ್ತು. ಈಗ ಪೊಲೀಸರು ನಟನ ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ .

ದೂರಿನ ಪ್ರಕಾರ, ಅಕ್ಟೋಬರ್ 9 ರ ರಾತ್ರಿ ಮಂಗಳೂರಿಗೆ ಬಂದಿದ್ದ ಜಯಕೃಷ್ಣನ್, ಉಬರ್ ಮತ್ತು ರಾಪಿಡೋ  ಅಪ್ಲಿಕೇಶನ್‌ಗಳ ಮೂಲಕ ಕ್ಯಾಬ್ ಬುಕ್ ಮಾಡಿದ್ದಾರೆ. ಅವರ ಪಿಕಪ್ ವಿಳಾಸವನ್ನು ಮಂಗಳೂರು, ಬೆಜೈ ನ್ಯೂ ರೋಡ್ ಎಂದು ನೀಡಿದ್ದಾರೆ.  ಕ್ಯಾಬ್ ಚಾಲಕ ಅಹ್ಮದ್ ಶಫೀಕ್, ಪಿಕಪ್ ಸ್ಥಳವನ್ನು ದೃಢೀಕರಿಸಲು ಅಪ್ಲಿಕೇಶನ್ ಮೂಲಕ ಅವರನ್ನು ಸಂಪರ್ಕಿಸಿದ್ದಾರೆ.

ಶಫೀಕ್ ಕನ್ನಡದಲ್ಲಿ ಮಾತನಾಡಿದಾಗ, ಮಲಯಾಳಂನಲ್ಲಿ ಮಾತನಾಡುವಂತೆ ಜಯಕೃಷ್ಣನ್ ಸೂಚಿಸಿದ್ದರು. ಕರೆ ಮಾಡಿದಾಗ ಅಪ್ಪ-ಅಮ್ಮನಿಗೆ ಬೈದಿದ್ದಾರೆ. ‘ಮುಸ್ಲಿಂ ತೀರ್ವವಾದಿ, ಟೆರರಿಸ್ಟ್ ಅಂತಾ ಅಪಹಾಸ್ಯ ಮಾಡಿದ್ದಾರೆ. ಅವರಿಗೆ ಕಾರು ಬೇಡ. ಕ್ಯಾಬ್​ನವರನ್ನು ಆಟ ಆಡಿಸೋಕೆ ಈ ರೀತಿ ಮಾಡಿದ್ದಾರೆ’ ಎಂದು ರಫೀಕ್ ದೂರಿದ್ದಾರೆ.

ಕ್ಯಾಬ್ ಬುಕ್ ಮಾಡಿದ ಬಳಿಕ ಕಾರು ಚಾಲಕ 500 ಮೀಟರ್ ದೂರದಲ್ಲಿರುವಾಗ ರೈಡ್​ನ ಕ್ಯಾನ್ಸಲ್ ಮಾಡುತ್ತಿದ್ದರು. ಇದನ್ನು ದಕ್ಷಿಣ ಕನ್ನಡ ಜಿಲ್ಲೆಯ ಆನ್ಲೈನ್ ಟ್ಯಾಕ್ಸಿ ಚಾಲಕರ ಸಂಘ ಮಾಡಿತ್ತು. ಈಗ ಜಯಕೃಷ್ಣನ್ ಅವರ ಬಂಧನ ಆಗಿದೆ. ಕ್ಯಾಬ್ ಚಾಲಕನ ವಿರುದ್ಧ ಕೋಮು ನಿಂದನೆ ಮಾಡಿದ್ದಾರೆ ಎನ್ನಲಾದ ಘಟನೆಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.