ನ್ಯೂಸ್

ಮಾದಕ ದ್ರವ್ಯ ಸೇವನೆ ಆರೋಪ: ಮಲಯಾಳಂ ನಟ ಶೈನ್ ಟಾಮ್ ಚಾಕೊ ಬಂಧನ | Shine Tom Chacko

Shine Tom Chacko | ಮಾದಕ ದ್ರವ್ಯ ಸೇವನೆ ಆರೋಪದ ಮೇಲೆ ಮಲಯಾಳಂ ನಟ ಶೈನ್ ಟಾಮ್ ಚಾಕೊ ಅವರನ್ನು ಕೇರಳ ಪೊಲೀಸರು ಶನಿವಾರ ಬಂಧಿಸಿದ್ದಾರೆ. ವೈದ್ಯಕೀಯ ಪರೀಕ್ಷೆ ಮತ್ತು ಮುಂದಿನ ಕ್ರಮಗಳನ್ನು ಶೀಘ್ರದಲ್ಲೇ ನಡೆಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣ ಏನು?

ಏ.16 ಬುಧವಾರ ರಾತ್ರಿ ಪೊಲೀಶ್​​ ದಾಳಿ ಸಮಯದಲ್ಲಿ ಹೋಟೆಲ್‌ನಿಂದ ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ, ಕೊಚ್ಚಿ ನಗರ ಪೊಲೀಸರು ಚಾಕೊಗೆ ನೋಟಿಸ್ ನೀಡಿದ ಒಂದು ದಿನದ ನಂತರ ಈ ಬಂಧನ ನಡೆದಿದೆ. ಘಟನೆ ಎರ್ನಾಕುಲಂ ಉತ್ತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವುದರಿಂದ ನೋಟಿಸ್ ನೀಡಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆತನ ವಿರುದ್ಧ ಮಾದಕ ದ್ರವ್ಯ ಮತ್ತು ಎನ್‌ಡಿಪಿಎಸ್ ಕಾಯ್ದೆಯ ಸೆಕ್ಷನ್ 27 ಹಾಗೂ 29 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದಕ್ಕೂ ಮೊದಲು ಮಾದಕ ದೃವ್ಯ ವ್ಯಸನಿ ಆಗಿದ್ದ, ನಟ ಶೈನ್ ಟಾಮ್ ಚಾಕೊ ಇನ್ನೂ ಬಿಡುಗಡೆಯಾಗದ 'ಸೂತ್ರವಾಸ್ಯಂ' ಚಿತ್ರದ ಚಿತ್ರೀಕರಣದ ಸಮಯದಲ್ಲಿ ಅನುಚಿತ ವರ್ತನೆಯ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದ ನಟಿ ವಿನ್ಸಿ ಅಲೋಶಿಯಸ್, ಚಾಕೊ ಅವರ ಹೆಸರನ್ನು ಫಿಲ್ಮ್ ಚೇಂಬರ್ ಮತ್ತು ಮಲಯಾಳಂ ಚಲನಚಿತ್ರ ಕಲಾವಿದರ ಸಂಘಕ್ಕೆ ದೂರು ನೀಡಿ ಸುದ್ದಿಯಾಗಿದ್ದರು. (ಏಜೆನ್ಸೀಸ್​)