ನ್ಯೂಸ್

ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು!

ಪ.ಬಂಗಾಳ: ಪಶ್ಚಿಮ ಬಂಗಾಳ ಸಿಎಂ ಹಾಗೂ ತೃಣಮೂಲ ಕಾಂಗ್ರೆಸ್ ನಾಯಕಿ ಮಮತಾ ಬ್ಯಾನರ್ಜಿ ಅವರ ಹಣೆಗೆ ಗಂಭೀರವಾಗಿ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಟಿಎಂಸಿ ಪಕ್ಷವು ತನ್ನ ಎಕ್ಸ್‌ನಲ್ಲಿ ಪೋಸ್ಟ್ ಮೂಲಕ ಅಧಿಕೃತವಾಗಿ ತಿಳಿಸಿದೆ.

ಅಖಿಲ ಭಾರತ ತೃಣಮೂಲ ಕಾಂಗ್ರೆಸ್, ಆಸ್ಪತ್ರೆಯ ಹಾಸಿಗೆಯ ಮೇಲೆ ಮಮತಾ ಬ್ಯಾನರ್ಜಿ ಮಲಗಿರುವ ಫೋಟೋ ಹಂಚಿಕೊಂಡಿದ್ದು, ಬ್ಯಾನರ್ಜಿಯ ಹಣೆಯ ಮಧ್ಯದಲ್ಲಿ ಆಳವಾದ ಕಟ್ ಆಗಿದ್ದು, ಮುಖದ ಮೇಲೆ ಬಿದ್ದಿರುವ ಗುರುತಿನ ಫೋಟೋಗಳನ್ನು ಹರಿಬಿಟ್ಟಿದೆ. ಸದ್ಯದ ಮಟ್ಟಿಗೆ ಪಶ್ಚಿಮ ಬಂಗಾಳ ಸರ್ಕಾರ ಮತ್ತು ಪಕ್ಷವು ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿಲ್ಲ.

"ನಮ್ಮ ಅಧ್ಯಕ್ಷೆ ಮಮತಾ ಬ್ಯಾನರ್ಜಿ ಅವರಿಗೆ ಗಂಭೀರ ಗಾಯವಾಗಿದೆ. ದಯವಿಟ್ಟು ಅವರು ಶೀಘ್ರ ಗುಣಮುಖರಾಗಿ ಬರಲಿ ಎಂದು ಪ್ರಾರ್ಥಿಸಿ" ಎಂದು ಪಕ್ಷವು ಪೋಸ್ಟ್‌ನಲ್ಲಿ ತಿಳಿಸಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗಿದೆ,(ಏಜೆನ್ಸೀಸ್).