ಕೊಲ್ಕತ್ತ: ಹವಾಮಾನ ವೈಪರೀತ್ಯದಿಂದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಂಚರಿಸುತ್ತಿದ್ದ ಹೆಲಿಕಾಪ್ಟರ್ ಸಿಲುಗುರಿ ಬಳಿ ಇರುವ ಸೆವೋಕ್ ವಾಯುನೆಲೆಯಲ್ಲಿ ತುರ್ತು ಭೂ ಸ್ಪರ್ಶ ಮಾಡಿದೆ.
ಹೆಲಿಕಾಪ್ಟರ್ ತುರ್ತು ಭೂ ಸ್ಪರ್ಶ ಮಾಡಿದ ಪರಿಣಾಮ ಮಮತಾ ಬ್ಯಾನರ್ಜಿ ಸೊಂಟ, ಕಾಲಿಗೆ ಗಾಯವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ SSKM ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತ ಮಮತ ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಟಿಎಂಸಿ-ಬಿಜೆಪಿ ನಾಯಕರ ನಡುವೆ ಕೆಸರೆರಚಾಟ ಶುರುವಾಗಿದೆ.
ಇದನ್ನೂ ಓದಿ: VIDEO| ನೀರಿನೊಳಗೆ ಕೈಹಾಕಿ ಶಾರ್ಕ್ಗೆ ಆಹಾರವಾದ!
ಘಟನೆ ಕುರಿತು ಪ್ರತಿಕ್ರಿಯಿಸಿರುವ ಅಧಿಕಾರಿ ಒಬ್ಬರು ಬಾರಿ ಮಳೆ ಹಾಗೂ ಜೋರಾಗಿ ಗಾಳಿ ಬೀಸುತ್ತಿದ್ದ ಕಾರಣ ಹೆಲಿಕಾಪ್ಟರ್ಅನನ್ಉ ಪೈಲಟ್ ತುರ್ತು ಭೂ ಸ್ಪರ್ಶ ಮಾಡಿದೆ. ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಮುಖ್ಯಮಂತ್ರಿಗಳ ಕಾಲು ಹಾಗೂ ಸೊಂಟದ ಭಾಗಕ್ಕೆ ಗಾಯವಾಗಿದ್ದು, ಅವರನ್ನು SSKM ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಪಡೆದ ನಂತರ ಬಾಗ್ಡೋಗ್ರಾ ವಿಮಾನ ನಿಲ್ದಾಣಕ್ಕೆ ರಸ್ತೆ ಮಾರ್ಗವಾಗಿ ತೆರಳಿದ್ದಾರೆ ಎಂದು ತಿಳಿಸಿದ್ಧಾರೆ
ಜುಲೈ 8ರಂದು ನಡೆಯುವ ಪಂಚಾಯತ್ ಚುನಾವಣೆ ಸಂಬಂಧ ಪಶ್ಚಿಮ ಬಂಗಾಳದ ಉತ್ತರ ಭಾಗದಲ್ಲಿರುವ ಜಿಲ್ಲೆಗಳಲ್ಲಿ ಸಿಎಂ ಎರಡು ದಿನಗಳ ಪ್ರವಾಸವನ್ನು ಕೈಗೊಂಡಿದ್ದರು. ಮಮತಾ ಬ್ಯಾನರ್ಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ನಾಯಕ ಸುಕಾಂತ್ ಪ್ರತಿ ಚುನಾವಣೆ ಸಂದರ್ಭದಲ್ಲಿ ಸಿಎಂಗೆ ಯಾಕೆ ಗಾಯ ಮಾಡಿಕೊಳ್ಳುತ್ತಾರೆ ಎಂದು ಪ್ರಶ್ನಿಸುವ ಮೂಲಕ ಟಿಎಂಸಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.