ಪಶ್ಚಿಮಬಂಗಾಳ: ಪಶ್ಚಿಮಬಂಗಾಳದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ, ಸಂದೇಶಖಾಲಿ ಗ್ರಾಮದ ಮಹಿಳೆಯರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಅವರನ್ನು ಬಂಧಿಸಿದ ಕಾರಣಕ್ಕಾಗಿ ಸಿಎಂ ಮಮತಾ ಬ್ಯಾನರ್ಜಿಯನ್ನು ಜೈಲಿಗೆ ಹಾಕಲಾಗುವುದು ಎಂದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಮಂಗಳವಾರ ಹೇಳಿದ್ದಾರೆ.
ರಾಜ್ಯದಲ್ಲಿ (2026ರಲ್ಲಿ) ಬಿಜೆಪಿ ಅಧಿಕಾರಕ್ಕೆ ಬಂದರೆ, ಸಂದೇಶಖಾಲಿ ಘಟನೆಗೆ ಸಂಬಂಧಿಸಿದಂತೆ ಆಯೋಗವನ್ನು ರಚಿಸಲಾಗುವುದು. ಸಂದೇಶಖಾಲಿಯಲ್ಲಿ ಪ್ರತಿಭಟನಾನಿರತ ಮಹಿಳೆಯರನ್ನು ಬಂಧಿಸಿದ್ದಕ್ಕಾಗಿ ಮಮತಾ ಬ್ಯಾನರ್ಜಿ ಅವರನ್ನು ಜೈಲಿಗೆ ಹಾಕಲಾಗುತ್ತದೆ ಎಂದು ಅಧಿಕಾರಿ ಹೇಳಿದರು.
ಸಂದೇಶ್‌ಖಾಲಿಯಲ್ಲಿ ಪ್ರತಿಭಟನಾನಿರತ ಮಹಿಳೆಯರ ಮೇಲೆ ತೃಣಮೂಲ ಕಾಂಗ್ರೆಸ್ ಸರ್ಕಾರ ಸುಳ್ಳು ಆರೋಪಗಳನ್ನು ಹೊರಿಸಿದೆ. ಇದೀಗ ಸಿಎಂ ಬ್ಯಾನರ್ಜಿ ಗ್ರಾಮಕ್ಕೆ ಭೇಟಿ ನೀಡಿದ್ದಾರೆ. ಇದು ಹಾನಿಯನ್ನು ಸರಿಪಡಿಸುವ ಪ್ರಯತ್ನವಾಗಿದೆ ಎಂದು ಟೀಕಿಸಿದ್ದಾರೆ.
ಕಳೆದ (ಲೋಕಸಭಾ) ಚುನಾವಣೆಯಲ್ಲಿ ರೇಖಾ ಪಾತ್ರವನ್ನು ಸೋಲಿಸಲು ಅವರು (ತೃಣಮೂಲ ಕಾಂಗ್ರೆಸ್) ಸಂದೇಶಖಾಲಿಯಲ್ಲಿ ಕುಟುಕು ಕಾರ್ಯಾಚರಣೆಯನ್ನು ಪೊಲೀಸರ ಸಹಾಯದಿಂದ ನಡೆಸಿದ್ದರು. ಹಿಂದೂಗಳು ಬಹುಸಂಖ್ಯಾತರಾಗಿರುವ ಸಂದೇಶಖಾಲಿಯಲ್ಲಿ ಮಮತಾ ಬ್ಯಾನರ್ಜಿಗೆ ಮುಂದಿನ ದಿನಗಳಲ್ಲಿ ಭವಿಷ್ಯ ಇಲ್ಲ ಎಂದರು.
ಈ ಪ್ರದೇಶವು ಪ್ರಧಾನಿ ನರೇಂದ್ರ ಮೋದಿಯವರ 7,000 ಬೆಂಬಲಿಗರನ್ನುಹೊಂದಿದೆ ಎಂದು ಪ್ರತಿಪಾದಿಸಿದ ಅಧಿಕಾರಿ, ಬ್ಯಾನರ್ಜಿ ಅವರನ್ನು ರಾಜ್ಯದ ಮಾಜಿ ಮುಖ್ಯಮಂತ್ರಿ ಮಾಡಲು 2026 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡುವಂತೆ ಜನರನ್ನು ಒತ್ತಾಯಿಸಿದರು.(ಏಜೆನ್ಸೀಸ್)