ನ್ಯೂಸ್

ಆನ್​ಲೈನ್​ನಲ್ಲಿ ಹಿಂದೂ ದೇವತೆಗಳ ಅಶ್ಲೀಲ ಚಿತ್ರ ಮಾರಾಟ; ಓರ್ವ ಅರೆಸ್ಟ್​

ನವದೆಹಲಿ: ಹಿಂದೂ ದೇವತೆಗಳ ಅಶ್ಲೀಲ ಚಿತ್ರಗಳನ್ನು ಆನ್​ಲೈನ್​ನಲ್ಲಿ ಮಾರಾಟ ಮಾಡುವ ಮೂಲಕ ನಿಂದನೆ ಹಾಗೂ ಅಗೌರವ ತೋರಿದ ಆರೋಪದ ಮೇಲೆ ದೆಹಲಿ ಪೊಲೀಸರು ವ್ಯಕ್ತಿಯೋರ್ವನನ್ನು ವಶಕ್ಕೆ ಪಡೆದಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರ ಬಂಧನವಾಗುವ ಸಾಧ್ಯತೆ ಇದ್ದು, ಆರೋಪಿ ನೀಡುವ ಹೇಳಿಕೆಯನ್ನು ಆಧರಿಸಿ ಪೊಲೀಸರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಹಿಂದೂ ದೇವತೆಗಳ ಅಶ್ಲೀಲ ಫೋಟೋಗಳನ್ನು ಆನ್​ಲೈನ್​ ಮೂಲಕ ಮಾರಾಟಮಾಡಲಾಗುತ್ತಿದೆ ಎಂಬ ಬಗ್ಗೆ ಮೊದಲಿಗೆ ದೂರು ದಾಖಲಾಗಿತ್ತು. ಈ ಸಂಬಂಧ ವಿಶೇಷ ತಂಡ ಒಂದನ್ನು ರಚಿಸಿ ತನಿಖೆ ನಡೆಸಿ ವರದಿಸಲ್ಲಿಸುವಂತೆ ಆದೇಶಿಸಲಾಗಿತ್ತು.

ಇದಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ಬಂಧಿತ ಆರೋಪಿ ವಿರುದ್ಧ ಭಾರತ ದಂಡ ಸಂಹಿತೆ (IPC Section) 295, ಮಾಹಿತಿ ತಂತ್ರಜ್ಞಾನ ಕಾಯ್ದೆ 67A ಅಡಿ FIR ದಾಖಲಿಸಲಾಗಿದೆ. ವಿಚಾರಣೆ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆನ್​ಲೈನ್​ನಲ್ಲಿ ಹಿಂದೂ ದೇವೆತಗಳ ಆಶ್ಲೀಲ ಚಿತ್ರಗಳು ಮಾರಾಟವಾಗುತ್ತಿರುವ ಕುರಿತು ಕಠಿಣ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರಿಗೆ ರಾಷ್ಟ್ರೀಯ ಮಹಿಳಾ ಆಯೋಗವು ನೋಟಿಸ್​ ಜಾರಿ ಮಾಡಿತ್ತು.