ನ್ಯೂಸ್

ಮುಖ್ಯಮಂತ್ರಿ ನಿವಾಸಕ್ಕೆ ಬಾಂಬ್​ ಹಾಕುವುದಾಗಿ ಬೆದರಿಕೆ ಕರೆ ಮಾಡಿದ್ದವನ ಬಂಧನ

ಜೈಪುರ: ರಾಜಸ್ಥಾನ ಮುಖ್ಯಮಂತ್ರಿಗೆ ಪ್ರಾಣ ಬೆದರಿಕೆ ಹಾಕಿದವನನ್ನು ಪೊಲೀಸರು ಬಂಧಿಸಿದ್ದಾರೆ.

ಈತ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಅವರ ನಿವಾಸಕ್ಕೆ ಬಾಂಬ್​ ಹಾಕುವುದಾಗಿ ಕರೆ ಮಾಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬೆದರಿಕೆ ಕರೆ ಮಾಡಿದವನನ್ನು ಮುಕೇಶ್​ ಕುಮಾರ್​ ಎಂದು ಗುರುತಿಸಲಾಗಿದ್ದು, ಆತನನ್ನು ಬಂಧಿಸಲಾಗಿದೆ. ವಿಚಾರಣೆ ನಡೆಸುತ್ತಿದ್ದೇವೆ ಎಂದು ಜೈಪುರ ಸೌತ್​ ಡಿಸಿಪಿ ಮನೋಜ್​ ಚೌಧರಿ ತಿಳಿಸಿದ್ದಾರೆ.