ನ್ಯೂಸ್

6 ಸಾವಿರ ರೂ. ಲಂಚ ಪಡೆಯುವಾಗ ಗೃಹರಕ್ಷಕ ದಳದ ಡೆಪ್ಯುಟಿ ಕಮಾಂಡೆಂಟ್ ಲೋಕಾ ಬಲೆಗೆ

ಕೋಲಾರ: ಲಂಚ ಪಡೆಯುವ ವೇಳೆ ಇಲ್ಲೊಬ್ಬರು ಗೃಹರಕ್ಷಕ ದಳದ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲಿಗೆ ಬಿದ್ದಿದ್ದಾರೆ. ಕೋಲಾರದ ಗೃಹರಕ್ಷಕ ದಳದ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್​ 6000 ರೂಪಾಯಿ ಲಂಚ ಪಡೆಯುವ ವೇಳೆ ಕಚೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸುಬಾನಾಯಕ್​ ಎಂಬುವವರ ಬಳಿ ಡೆಪ್ಯೂಟಿ ಕಮಾಂಡೆಂಟ್ ರಾಜೇಂದ್ರನ್, ಬೆಂಗಳೂರು ಮೆಟ್ರೋದಲ್ಲಿ ಕೆಲಸಕ್ಕೆ ನಿಯೋಜನೆ ಮಾಡಿ ಕೊಡಲು 6000 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಲಾಗಿದೆ. ಅವರು ಲಂಚ ಪಡೆಯುವ ವೇಳೆ ಕೋಲಾರ ಲೋಕಾಯುಕ್ತ ಎಸ್ಪಿ ಉಮೇಶ್​ ನೇತೃತ್ವದ ತಂಡ ಬಲೆ ಬೀಸಿದ್ದು ರಾಜೇಂದ್ರನ್ ಸಿಕ್ಕಿ ಬಿದ್ದಿದ್ದಾರೆ. 

ಸದ್ಯ ಆರೋಪಿಯನ್ನು ಬಂಧಿಸಿರುವ ಲೋಕಾಯುಕ್ತ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.