ಸಾಂದರ್ಭಿಕ ಚಿತ್ರ 
ನ್ಯೂಸ್

ಮೆಜೆಸ್ಟಿಕ್‌ನಲ್ಲಿ ಮೆಟ್ರೋ ಹಳಿಗೆ ಹಾರಿ ವ್ಯಕ್ತಿ ಆ*ತ್ಮಹತ್ಯೆಗೆ ಯತ್ನ! ಯುವಕ ಆಸ್ಪತ್ರೆಗೆ ದಾಖಲು...metro

ಬೆಂಗಳೂರು :  (metro )  ಯುವಕನೊಬ್ಬ ರೈಲು ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ನಡೆದಿದೆ. ಗಾಯಗೊಂಡ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಯುವಕನನ್ನು 31 ವರ್ಷ ವಯಸ್ಸಿನ ಜಯಂತ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದು, ಗಾಯಗೊಂಡಿರುವ ಆತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

 ನಡೆದಿದ್ದೇನು?: 

ಬೈಯ್ಯಪ್ಪನಹಳ್ಳಿಯಿಂದ ನ್ಯಾಷನಲ್ ಕಾಲೇಜ್ ಕಡೆ ಹೊರಟಿದ್ದ ಜಯಂತ್ ರಾತ್ರಿ 10 ಗಂಟೆಗೆ ಮೆಜೆಸ್ಟಿಕ್ ನಿಲ್ದಾಣದಲ್ಲಿ ಇಳಿದಿದ್ದ. ಬಳಿಕ ನ್ಯಾಷನಲ್ ಕಾಲೇಜ್ ಕಡೆ ಹೋಗಲು ಪ್ಲಾಟ್​ಫಾರಂ ನಾಲ್ಕಕ್ಕೆ ಬಂದಿದ್ದ. ನಂತರ ರೈಲು ಬರುತ್ತಿದ್ದಂತೆಯೇ ಏಕಾಏಕಿ ಹಳಿ ಮೇಲೆ ಹಾರಿದ್ದ.

ಯುವಕ ಹಳಿಗೆ ಜಿಗಿಯುತ್ತಿರುವುದನ್ನು ಕಂಡ ಕೂಡಲೇ ಮೆಟ್ರೋ ಆಪರೇಟರ್ ಎಮರ್ಜೆನ್ಸಿ ಬ್ರೇಕ್ ಹಾಕಿ ರೈಲು ನಿಲ್ಲಿಸಿದ್ದರು. ತಕ್ಷಣವೇ ಜಯಂತನನ್ನು ರಕ್ಷಣೆ ಮಾಡಿದ್ದು ಆ್ಯಂಬುಲೆನ್ಸ್​​​ನಲ್ಲಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿದ್ದಾರೆ. ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಈ ಪ್ರಕರಣ ಕುರಿತಾಗಿ ಉಪ್ಪಾರಪೇಟೆ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.