ನ್ಯೂಸ್

VIDEO| ಗದರ್​-2 ಸ್ಕ್ರೀನಿಂಗ್​ ವೇಳೆ ಪ್ರೇಕ್ಷಕನನ್ನು ಅಮಾನುಷವಾಗಿ ಥಳಿಸಿದ ಯುವಕ

ಲಖನೌ: ಬಾಲಿವುಡ್​ ನಟ, ಸಂಸದ ಸನ್ನಿ ಡಿಯೋಲ್​-ಅಮೀಶಾ ಪಟೇಲ್​ ಅಭಿನಯದ ಗದರ್​-2 ಚಿತ್ರ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದ್ದು, ಬಿಡುಗಡೆಯಾದ ನಾಲ್ಕು ದಿನಗಳಲ್ಲೇ 93 ಲಕ್ಷ ಟಿಕೆಟ್​ಗಳು ಮಾರಾಟವಾಗುವ ಮೂಲಕ 152 ಕೋಟಿ ರೂಪಾಯಿ ಆದಾಯ ಗಳಿಸಿದೆ.

ಇದೀಗ ಗದರ್​-2 ಚಿತ್ರ ವೀಕ್ಷಿಸುವ ವೇಳೆ ವ್ಯಕ್ತಿಗಳಿಬ್ಬರ ನಡುವೆ ಪ್ರೇಕ್ಷಕರಿಬ್ಬರ ನಡುವೆ ಗಲಾಟೆಯಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಬೆಲ್ಟ್​ ಹಾಗೂ ಬೂಟ್​ ಕಾಲಿನಲ್ಲಿ ಥಳಿಸಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯ ಕೊತ್ವಾಲಿ ಎಂಬ ಪ್ರದೇಶದಲ್ಲಿ ನಡೆದಿದೆ.

ಕಾರಣ ನಿಗೂಢ

ಘಟನೆ ಕುರಿತು ಪ್ರತಿಕ್ರಿಯಿಸಿರುವ ಕೊತ್ವಾಲಿ ಪೊಲೀಸ್​ ಠಾಣೆಯ ಅಧಿಕಾರಿಯೊಬ್ಬರು ಪ್ರಸಾದ್​ ಚಿತ್ರಮಂದಿರಲ್ಲಿ ಭಾನುವಾರ ರಾತ್ರಿ 11 ಘಂಟೆ ಸುಮಾರಿಗೆ ಘಟನೆ ನಡೆದಿದ್ದು, ಯಾವ ಕಾರಣಕ್ಕಾಗಿ ಜಗಳವಾಗಿದೆ ಎಂಬುದು ಬಹಿರಂಗವಾಗಿಲ್ಲ. ಹಲ್ಲೆಗೊಳಗಾದ ಯುವಕನನ್ನೂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ.

ಆರೋಪಿ ಹಾಗೂ ಹಲ್ಲೆಗೊಳಗಾದ ಯುವಕ ಕುಡಿದ ಮತ್ತಿನಲ್ಲಿದ್ದ ಕಾರಣ ಚಿತ್ರ ವೀಕ್ಷಿಸುವ ವೇಳೆ ವಿಚಾರ ಒಂದಕ್ಕೆ ಇಬ್ಬರ ನಡುವೆ ಗಲಾಟೆಯಾಗಿ ಮಾತಿನ ಚಕಮಕಿ ಏರ್ಪಟ್ಟಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದ ಕಾರಣ ಆರೋಪಿಯೂ ಏಕಾಏಕಿ ಯುವಕನನ್ನು ಬೆಲ್ಟ್​ ಹಾಗೂ ಬೂಟ್​ಕಾಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.

ಹಲ್ಲೆಗೊಳಗಾದ ಯುವಕ ನೀಡಿರುವ ಹೇಳಿಕೆಯ್ನೂ ಆಧರಿಸಿ ಪ್ರದೇಶದಲ್ಲಿರುವ ಸಿಸಿಟಿವಿ ದೃಶ್ಯಾವಳಿಗಳನ್ನೂ ಪರಿಶೀಲಿಸಿ ಆರೋಪಿಯನ್ನೂ ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ಕೊತ್ವಾಲಿ ಪೊಲೀಸ್​ ಠಾಣೆಯ ಅಧಿಕಾರಿ ತಿಳಿಸಿದ್ದಾರೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಖಂಡನೆಗೆ ಗುರಿಯಾಗಿದೆ.