ನ್ಯೂಸ್

VIDEO| ಬೀದಿ ನಾಯಿಯನ್ನೂ ಬಿಡದ ಕಾಮಾಂಧ; ಕ್ಯಾಮೆರಾದಲ್ಲಿ ಸೆರೆಯಾಯ್ತು ಪೈಶಾಚಿಕ ಕೃತ್ಯ

ನವದೆಹಲಿ: ವಿಲಕ್ಷಣಕಾರಿ ಘಟನೆಯೊಂದರಲ್ಲಿ ವ್ಯಕ್ತಿಯೋರ್ವ ನಾಯಿಯ ಮೇಲೆ ಅತ್ಯಾಚಾರ ಎಸಗಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರಜೌರಿ ಗಾರ್ಡನ್​ ಪೊಲೀಸ್​ ಠಾಣೆ​ ವ್ಯಾಪ್ತಿಯಲ್ಲಿ ನಡೆದಿದೆ.

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಆರೋಪಿ ಪವನ್​ ಮಲ್ಹೋತ್ರಾ ವಿರುದ್ಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು, ಈತನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಹಲವರು ಆಗ್ರಹಿಸಿದ್ಧಾರೆ.

ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಪವನ್​ ಮಲ್ಹೋತ್ರಾ ನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಕಾರಣ ಈತ ಅವರ ಮೇಲೂ ಹಲ್ಲೆ ನಡೆಸಿ ಅಮಾನವೀಯವಾಗಿ ನಡೆದುಕೊಂಡಿರುವುದು ಬೆಳಕಿಗೆ ಬಂದಿದೆ. ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆ (IPC Section) 377ರ ಅಡಿ ಪ್ರಕರಣ ದಾಖಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಪ್ರಾಣಿ ದಯಾ ಸಂಘದ ಸದಸ್ಯರಾದ ಗರಿಮಾ ಬಜಾಜ್​ ಈತ 2019ರಿಂದಲೂ ಈ ರೀತಿಯ ಕೃತ್ಯ ಎಸಗುತ್ತಿದ್ದಾನೆ. ಅವರ ಕುಟುಂಬದವರು ಹಾಗೂ ನೆರೆಹೊರೆಯವರಿಗೂ ಈ ವಿಚಾರ ತಿಳಿದಿದ್ದು, ಯಾರೂ ಸಹ ದೂರು ಕೊಡಲು ಮುಂದೆ ಬಂದಿಲ್ಲ. ಕೃತ್ಯವನ್ನು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್​ ಮಾಡಿದ ವ್ಯಕ್ತಿಯ ಮೇಲೆ ಆರೋಪಿ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಚಾರವನ್ನು ಪ್ರಾಣಿ ದಯಾ ಸಂಘ ಹಾಗೂ ಪೊಲೀಸರಿಗೆ ಮಾಹಿತಿ ನೀಡಿರುವುದಾಗಿ ದೂರುದಾರೆ ಗರಿಮಾ ಬಜಾಜ್​ ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ರಜೌರಿ ಗಾರ್ಡನ್​ ಪೊಲೀಸ್​ ಠಾಣೆಯ ಅಧಿಕಾರಿಯೊಬ್ಬರು ಪ್ರಕರಣ ದಾಖಲಾಗುತ್ತಿದ್ದಂತೆ ಕೃತ್ಯ ಎಸಗಿದ ಆರೋಪಿ ತಲೆಮಾರಿಸಿಕೊಂಡಿದ್ದು, ಆತನ ಬಂಧನಕ್ಕಾಗಿ ವಿಶೇಷ ತಂಡವನ್ನು ರಚಿಸಲಾಗಿದೆ. ಈ ರೀತಿಯ ಅಮಾನವೀಯ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಲಾಗುವುದು ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.