ನ್ಯೂಸ್

ಬೀದಿ ನಾಯಿಯನ್ನೂ ಬಿಡದ ಕಾಮುಕ!

Bengaluru - General - Rama Kishan K V

ನವದೆಹಲಿ: ವ್ಯಕ್ತಿಯೊಬ್ಬ ಬೀದಿನಾಯಿಯ ಮೇಲೆ ಅತ್ಯಾಚಾರ ಎಸಗುತ್ತಿರುವ ಆಘಾತಕಾರಿ ವೀಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈತನ ಕೃತ್ಯಕ್ಕೆ ಇದೀಗ ಪ್ರಾಣಿ ಪ್ರಿಯರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಈ ಘಟನೆ ದೆಹಲಿಯ ಹರಿ ನಗರ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ವ್ಯಕ್ತಿಯೊಬ್ಬ ಬೀದಿ ನಾಯಿಯ ಮೇಲೆ ಆಗುತ್ತಿರುವ ದೌರ್ಜನ್ಯವನ್ನು ತನ್ನ ಮೊಬೈಲ್​ನಲ್ಲಿ ವೀಡಿಯೋ ಮಾಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ವರದಿಯಾಗಿದೆ. ವೀಡಿಯೋ ಸಹಿತ ದಾಖಲೆ ನೀಡಿದರೂ ಪೊಲೀಸರು ಮಾತ್ರ ಕೃತ್ಯ ಎಸಗಿದ ವ್ಯಕ್ತಿಯ ಮೇಲೆ ಪ್ರಕರಣ ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದಾರೆ ಎಂದು ವರದಿಯಾಗಿದೆ. ಈ ಕೃತ್ಯವನ್ನು ತರುಣ್ ಅಗರ್ವಾಲ್ ಎಂಬುವವರು ಟ್ವೀಟ್ ಮಾಡುತ್ತಿದ್ದಂತೆ ಅನೇಕ ಪ್ರಾಣಿ ಪ್ರಿಯರು ಕೃತ್ಯ ಎಸಗಿದಾತನನ್ನು ಪತ್ತೆ ಮಾಡಿ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸದಸ್ಯ ಪಂಖೂರಿ ಪಾಠಕ್ ಈ ಬಗ್ಗೆ ಧ್ವನಿ ಎತ್ತಿದ್ದು, ಪ್ರಕರಣ ದಾಖಲಿಸದ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ದೆಹಲಿ ಪೊಲೀಸರು ಮತ್ತು ಇತರ ಕೆಲವು ಅಧಿಕಾರಿಗಳನ್ನು ಟ್ಯಾಗ್ ಮಾಡಿದ ಅವರು ಟ್ವೀಟ್ ಮಾಡಿದ್ದಾರೆ, "ಎಫ್‌ಐಆರ್ ದಾಖಲಿಸಿ ಈ ದುಷ್ಕರ್ಮಿಯನ್ನು ಬಂಧಿಸದೆ ಹೋದಲ್ಲಿ ದೆಹಲಿ ಪೋಲೀಸರು ಅತ್ಯಾಚಾರಿಯನ್ನು ರಕ್ಷಿಸುತ್ತಿದೆ ನಾವು ಸ್ಪಷ್ಟವಾಗಿ ಹೇಳೋಣ ಎಂದು ಹೇಳಿದ್ದಾರೆ.

ಸದ್ಯ ಘಟನೆಯ ಬಗ್ಗೆ ದೆಹಲಿ ಪೊಲೀಸರು ಟ್ವೀಟ್ ಮಾಡಿ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕೃತ್ಯ ಎಸಗಿದಾತನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ. (ಏಜೆನ್ಸೀಸ್)