ನ್ಯೂಸ್

VIDEO| ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಪ್ರಾಣ ಬಿಟ್ಟ!

ಹೈದರಾಬಾದ್: ಸಂಭ್ರಮ, ಆಟ ಹೀಗೆ ಕೆಲವು ಸಂದರ್ಭಗಳಲ್ಲಿ ಹೃದಯಾಘಾತದ ಘಟನೆಗಳು ಹೆಚ್ಚುತ್ತಿವೆ. ಇಲ್ಲೊಬ್ಬ ಯುವಕ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ವಿಡಿಯೋ ವೈರಲ್‌ ಆಗಿದೆ.

ಪರಮೇಶ್ ಯಾದವ್ (39) ಮೃತ. ಇವರು ಮಲ್ಕಾಜ್ಗಿರಿ ಮೂಲದವರಾಗಿದ್ದಾರೆ. ಸಿಕಂದರಾಬಾದ್​ನ ಲಾಲಾಪೇಟ್​​ನ ಒಳಾಂಗಣ ಕ್ರೀಡಾಂಗಣದಲ್ಲಿ ಮಂಗಳವಾರ ರಾತ್ರಿ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಯಾದವ್ ತಮ್ಮ ಕಚೇರಿಯಿಂದ ಹಿಂದಿರುಗಿದ ನಂತರ ಪ್ರತಿನಿತ್ಯ ಬ್ಯಾಡ್ಮಿಂಟನ್ ಆಡುತ್ತಿದ್ದರು. ನಿನ್ನೆ ಕೂಡ ಅವರು ತಮ್ಮ ದಿನಚರಿಯಂತೆ ಕ್ರೀಡಾಂಗಣಕ್ಕೆ ಹೋಗಿದ್ದರು. ಮಂಗಳವಾರ ಸಂಜೆ 7.30 ರ ಸುಮಾರಿಗೆ ಈ ಘಟನೆ ನಡೆದಿದೆ. ಅವರನ್ನು ಗಾಂಧಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.