ಬೆಂಗಳೂರು: ರಾಜಧಾನಿಯಲ್ಲಿ ವ್ಯಕ್ತಿಯೊಬ್ಬ ಬೆತ್ತಲೆಯಾಗಿ ನಾಲ್ಕನೇ ಮಹಡಿಯಿಂದ ಕೆಳಕ್ಕೆ ಬಿದ್ದು ಪ್ರಾಣ ಬಿಟ್ಟಿದ್ದಾನೆ. ಬೊಮ್ಮನಹಳ್ಳಿಯಲ್ಲಿ ಇಂದು ಈ ಪ್ರಕರಣ ನಡೆದಿದೆ. ಮೊಹಮ್ಮದ್ ಹುಸೇನ್ (31) ಸಾವಿಗೀಡಾದ ವ್ಯಕ್ತಿ.
ಬೊಮ್ಮನಹಳ್ಳಿ ಬೇಗೂರು ರಸ್ತೆಯ ಮನೆಯಲ್ಲಿದ್ದ ಮಹಮ್ಮದ್ ಹುಸೇನ್ನನ್ನು ವಶಕ್ಕೆ ಪಡೆಯಲು ಪೊಲೀಸರ ತಂಡ ಹೋಗಿದ್ದಾಗ ಈ ಘಟನೆ ನಡೆದಿದೆ. ನಾಲ್ಕನೇ ಮಹಡಿಯ ಟೇರೆಸ್ನಲ್ಲಿ ಮಹಮ್ಮದ್ನನ್ನು ವಶಕ್ಕೆ ಪಡೆಯಲು ಮುಂದಾದಾಗ ಆತ ಕೆಳಕ್ಕೆ ಬಿದ್ದಿದ್ದಾನೆ.
ದೂರಿನ ಸಂಬಂಧ ವಿಚಾರಣೆ ನಡೆಸುವ ಸಲುವಾಗಿ ಆತನನ್ನು ವಶಕ್ಕೆ ಪಡೆಯಲು ತೆರಳಿದ್ದ ಪೊಲೀಸರ ಮೇಲೆ ಈಗ ಹಲ್ಲೆ ಆರೋಪ ಕೇಳಿ ಬಂದಿದೆ. ಬೊಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.