ಅಮೃತಸರ: ದೇಶದಲ್ಲಿ ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳೂ ಹೆಚ್ಚುತ್ತಿದ್ದು ಈ ನಿಟ್ಟಿನಲ್ಲಿ ಸರ್ಕಾರಗಳೂ ಕಾನೂನುಗಳನ್ನೂ ಜಾರಿಗೆ ತಂದರೂ ಯಾವುದೇ ಪ್ರಯೋಜನವಾಗದೆ ಇರುವುದು ಬೇಸರದ ಸಂಗತಿಯಾಗಿದೆ.
ಇದೀಗ ಪ್ರಕರಣ ಒಂದರಲ್ಲಿ ವ್ಯಕ್ತಿಯೋರ್ವ ಜನನಿಬಿಡ ಪ್ರದೇಶದಲ್ಲಿ ತನ್ನ ಪತ್ನಿಯನ್ನ ಕೊಚ್ಚಿ ಕೊಲೆ ಮಾಡಿದ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಪಂಜಾಬಿನ ಸಂಗ್ರೂರ್ ಜಿಲ್ಲೆಯಲ್ಲಿ ನಡೆದಿದೆ.
ಹತ್ಯೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಸಂಗ್ರೂರ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ದಾಂಪತ್ಯ ಕಲಹದಿಂದಾಗಿ ದಂಪತಿಗಳಿಬ್ಬರು ಪರಸ್ಪರ ವಿಚ್ಛೇದನ ಪಡೆಯಲು ಮುಂದಾಗಿದ್ದರು. ಅದರ ವಿಚಾರಣೆಯೂ ಸಹ ನ್ಯಾಯಾಲಯದಲ್ಲಿ ನಡೆಯುತ್ತಿತ್ತು. ಡೈವರ್ಸ್ ವಿಚಾರವಾಗಿ ತನ್ನ ಹೆಂಡತಿಯ ಮೇಲೆ ಕುಪಿತಗೊಂಡಿದ್ದ ವ್ಯಕ್ತಿ ಸಿಟ್ಟಿನಿಂದ ಕೊಲೆ ಮಾಡಿರಬಹುದು ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಸಂಗ್ರೂರ್ನ ಸುನಮ್ ಮಾರುಕಟ್ಟೆ ಪ್ರದೇಶದಲ್ಲಿ ಆರೋಪಿ ತನ್ನ ಹೆಂಡತಿಯನ್ನು ನೋಡಿದ್ದಾನೆ. ಇದರಿಂದ ಸಿಟ್ಟಿಗೆದ್ದ ಆತ ಅಲ್ಲೇ ತರಕಾರಿ ಅಂಗಡಿಯೊಂದರಲ್ಲಿ ಇದ್ದ ಮಚ್ಚಿನಿಂದ ಆಕೆಯ ಮೇಲೆ ದಾಳಿ ಮಾಡಿ ಹತ್ಯೆ ಮಾಡಿದ್ದಾನೆ. ಇದನ್ನೂ ಗಮನಿಸಿದ ಸ್ಥಳೀಯರೂ ಕೂಡಲೇ ಆತನನ್ನೂ ಹಿಡಿದು ಪೊಲೀಸರಿಗೆ ಒಪ್ಪಿಸಲೂಲು ಮುಂದಾಗಿದ್ದಾರೆ.
ಇದರಿಂದ ಭಯಬಿದ್ದ ಆತ ತಕ್ಷಣವೇ ವಿಷವನ್ನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೂಡಲೇ ಎಚ್ಚೆತ್ತ ಸ್ಥಳೀಯರೂ ಆತನನ್ನೂ ಆಸ್ಪತ್ರೆಗೆ ದಾಖಲಿಸಿ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಆರೋಪಿಯನ್ನೂ ವಿಚಾರಣೆಗೆ ಒಳಪಡಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್ಶೀಟ್ ಸಿದ್ದಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಸಂಗ್ರೂರ್ ವಿಭಾಗದ ಹಿರಿಯ ಪೊಲೀಸ್ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.