ತೆಲಂಗಾಣ: ಪತ್ನಿಯ ( cricket bat) ಮೇಲೆ ಅನುಮಾನಗೊಂಡ ಪತಿಯೊಬ್ಬ ಕ್ರಿಕೆಟ್ ಬ್ಯಾಟ್‌ನಿಂದ ಹೊಡದು ಪತ್ನಿಯನ್ನು ಕೊಂದು, ಆಕೆಯ ಅಂಗಾಂಗಗಳನ್ನು ಕತ್ತರಿಸಿ ಹಾಕಿದ್ದಾನೆ. ಸಂಗರೆಡ್ಡಿ ಜಿಲ್ಲೆಯ ಅಮೀನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಕೃಷ್ಣವೇಣಿ ಮತ್ತು ಬ್ರಹ್ಮಯ್ಯ ದಂಪತಿ ಸಂಗರೆಡ್ಡಿ ಜಿಲ್ಲೆಯ ಅಮೀನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೆಎಸ್‌ಆರ್ ಕಾಲೋನಿಯಲ್ಲಿ ವಾಸಿಸುತ್ತಿದ್ದಾರೆ. ಆದರೆ, ಕೆಲವು ಸಮಯದಿಂದ ದಂಪತಿ ನಡುವೆ ಆಗಾಗ್ಗೆ ಜಗಳಗಳು ನಡೆಯುತ್ತಿತ್ತು.
ಕೋಹಿರ್ ಡಿಸಿಸಿಬಿ ಬ್ಯಾಂಕಿನಲ್ಲಿ ಸಹಾಯಕ ವ್ಯವಸ್ಥಾಪಕಿಯಾಗಿ ಕೆಲಸ ಮಾಡುತ್ತಿರುವ ಕೃಷ್ಣವೇಣಿಯ ಮೇಲೆ ಆಕೆಯ ಪತಿ ಬ್ರಹ್ಮಯ್ಯ ಅನುಮಾನ ವ್ಯಕ್ತಪಡಿಸಿದ್ದರು. ಈ ಅನುಮಾನವೇ ಅಂತಿಮವಾಗಿ ದೌರ್ಜನ್ಯಕ್ಕೆ ಕಾರಣವಾಯಿತು.
ಭಾನುವಾರ ಬೆಳಿಗ್ಗೆ ಇದೇ ವಿಷಯಕ್ಕೆ ಸಂಬಂಧಿಸಿದಂತೆ ಪತಿ-ಪತ್ನಿ ನಡುವೆ ಮತ್ತೆ ಜಗಳ ನಡೆದಿದ್ದು, ಕೋಪದ ಭರದಲ್ಲಿ ಬ್ರಹ್ಮಯ್ಯ ಕೃಷ್ಣವೇಣಿ ಮೇಲೆ ಬ್ಯಾಟ್‌ನಿಂದ ಹಲ್ಲೆ ನಡೆಸಿ ಹಲ್ಲೆ ನಡೆಸಿದ್ದಾನೆ, ಇದರಿಂದಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.
ಈ ಘಟನೆಯ ಕುರಿತಾಗಿ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತಲುಪಿ ಶವವನ್ನು ವಶಪಡಿಸಿಕೊಂಡಿದ್ದಾರೆ. ನಂತರ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.