ಮಧ್ಯಪ್ರದೇಶ: ಸತ್ನಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಜಿಲ್ಲಾ ಆಸ್ಪತ್ರೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಅಜ್ಜನನ್ನು ಬೈಕ್ನ ಹಿಂಬದಿಯಲ್ಲಿ ಕೂರಿಸಿಕೊಂಡು ನೇರವಾಗಿ ಆಸ್ಪತ್ರೆಯೊಳಗಿನ ತುರ್ತು ಚಿಕಿತ್ಸಾ ವಿಭಾಗಕ್ಕೆ ಕರೆತಂದಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ನೆಟ್ಟಿಗರು ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.
ಇದನ್ನೂ ಓದಿ: ಯುಪಿಪಿಎಸ್ಸಿ ಪರೀಕ್ಷೆಯಲ್ಲಿ ಪೇಪರ್ ಲೀಕ್! ಆರೋಪ ನಿರಾಕರಿಸಿದ ನೇಮಕಾತಿ ಸಂಸ್ಥೆ, ಗೊಂದಲದಲ್ಲಿ ಅಭ್ಯರ್ಥಿಗಳು
ಅನಾರೋಗ್ಯದಿಂದ ಬಳಲುತ್ತಿದ್ದ ಅಜ್ಜನನ್ನು ಆಸ್ಪತ್ರೆಗೆ ಸಾಗಿಸಲು ಆಂಬ್ಯುಲೆನ್ಸ್ಗೆ ಕಾಯದ ವ್ಯಕ್ತಿ, ತನ್ನದೇ ಬೈಕ್ನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ಸಿಬ್ಬಂದಿಗಳಿಗೆ ತಿಳಿಸಿ, ನೇರವಾಗಿ ತುರ್ತು ಚಿಕಿತ್ಸಾ ಘಟಕಕ್ಕೆ ಬೈಕ್ನ ಚಲಾಯಿಸಿದ್ದಾರೆ. ತದನಂತರ ವೃದ್ಧನನ್ನು ಗಮನಿಸಿದ ವೈದ್ಯರ ತಂಡ, ಹೆಚ್ಚಿನ ಚಿಕಿತ್ಸೆಗೆ ಮುಂದಾಗಿದ್ದಾರೆ.
ಘಟನೆಯ ವಿಡಿಯೋವನ್ನು ಸ್ಥಳೀಯರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದು, ಅದನ್ನು ಸೋಷಿಯಲ್ ಮೀಡಿಯಾ ಖಾತೆಯಾದ ಎಕ್ಸ್ನಲ್ಲಿ (ಈ ಹಿಂದಿನ ಟ್ವಿಟರ್) ಹಂಚಿಕೊಂಡಿದ್ದಾರೆ. ವಿಡಿಯೋ ನೋಡಿದ ನೆಟ್ಟಿಗರು, ಇದು ಬಾಲಿವುಡ್ನ 3 ಈಡಿಯಟ್ಸ್ ಸಿನಿಮಾದ ಒಂದು ಸೀನ್ ಅನ್ನು ನೆನಪಿಸುತ್ತದೆ ಎಂದು ಕಮೆಂಟ್ ಮೂಲಕ ಅಭಿಪ್ರಾಯಿಸಿದ್ದಾರೆ,(ಏಜೆನ್ಸೀಸ್).