ನ್ಯೂಸ್

ಮದುವೆಯಾಗಲು ನಿರಾಕರಿಸಿದ್ದಕ್ಕೆ ಶಾಲೆಯಲ್ಲೇ Teacher ಕತ್ತು ಸೀಳಿ ಹತ್ಯೆ ಮಾಡಿದ ದುಷ್ಕರ್ಮಿ

ಚೆನ್ನೈ: ತನ್ನನ್ನು ಮದುವೆಯಗಾಲು ನಿರಾಕರಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ಶಾಲೆಯ ಆವರಣದಲ್ಲೇ ಶಿಕ್ಷಕಿಯನ್ನು (Teacher) ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನ ತಂಜಾವೂರಿನಲ್ಲಿ ನಡೆದಿದೆ.

ಆರೋಪಿಯನ್ನು ಮದನ್​ (30) ಎಂದು ಗುರುತಿಸಲಾಗಿದ್ದು, ಪೊಲೀಸರು ಈತನನ್ನು ಬಂಧಿಸಿದ್ದಾರೆ. ಮೃತ ಶಿಕ್ಷಕಿಯನ್ನು (Teacher) ರಮಣಿ (26) ಎಂದು ಗುರುತಿಸಲಾಗಿದೆ.

ಘಟನೆ ಕುರಿತು ಮಾಹಿತಿ ನೀಡಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಕೆಲ ದಿನಗಳ ಹಿಂದೆ ಮದನ್​ ಹಾಗೂ ರಮಣಿ ಕುಟುಂಬಸ್ಥರ ನಡುವೆ ಮದುವೆ ಮಾತುಕತೆ ನಡೆಸಲಾಗಿತ್ತು. ಆದರೆ, ರಮಣಿ ಮದುವೆ ಪ್ರಸ್ತಾವನೆಯನ್ನು ತಿರಸ್ಕರಿಸಿದ್ದರು. ಇದರಿಂದ ಕುಪಿತಗೊಂಡಿದ್ದ ಆರೋಪಿ ಮದನ್​ ಹರಿತವಾದ ಆಯುಧದಿಂದ ಶಾಲೆಯ ಆವರಣದಲ್ಲೇ ಶಿಕ್ಷಕಿಯ (Teacher) ಕತ್ತು ಸೀಳಿ ಹತ್ಯೆ ಮಾಡಿದ್ದಾನೆ. ಆರೋಪಿಯನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ವಿಚಾರಣೆಗೆ ಒಳಪಡಿಸಲಾಗುತ್ತದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾತಣಾಡಿರುವ ಶಿಕ್ಷಣ ಸಚಿವ ಅನ್ಬಿಲ್ ಮಹೇಶ್ ಪೊಯ್ಯಮಿಳಿ, ತಂಜಾವೂರು ಜಿಲ್ಲೆಯ ಮಲ್ಲಿಪಟ್ಟಣಂ ಸರ್ಕಾರಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಕಿ ರಮಣಿ ಹತ್ಯೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಶಿಕ್ಷಕರ ಮೇಲಿನ ದೌರ್ಜನ್ಯವನ್ನು ಸಹಿಸಲು ಸಾಧ್ಯವಿಲ್ಲ. ಕೊಲೆಗಾರನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು. ಮೃತರ ಕುಟುಂಬಕ್ಕೆ ನಾವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇವೆ. ತಕ್ಷಣವೇ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್​ ನಡೆಸುವಂತೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.