ನ್ಯೂಸ್

ತಾನೇ ತಯಾರಿಸಿದ ಬಂದೂಕಿನಿಂದ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ ನಡೆಸಿದ ಆರೋಪಿ!

ಟೋಕಿಯೋ: ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ ನಡೆಸಿದ ವ್ಯಕ್ತಿಯನ್ನು ಜಪಾನ್​ ಪೊಲೀಸರು ಬಂಧಿಸಿದ್ದು, ತೀವ್ರ ತನಿಖೆ ಕೈಗೊಂಡಿದ್ದಾರೆ.

ಯಮಗಮಿ ತೆತ್ಸುಯಾ (41) ಎಂಬಾತನನ್ನು ಬಂಧಿಸಲಾಗಿದ್ದು, ಸದ್ಯ ಗುಂಡಿನದಾಳಿ ನಡೆಸಿದ್ದು ಏಕೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದು, ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಆತನೇ ತಯಾರಿಸಿದ ಬಂದೂಕಿನಿಂದಲೇ ಗುಂಡಿನ ದಾಳಿ ನಡೆಸಿರುವುದು ಬಯಲಾಗಿದೆ. ಅಲ್ಲದೇ ದಾಳಿ ನಡೆಸಿದ ಮೇಲೆಯೂ ಈತ ತಪ್ಪಿಸಿಕೊಳ್ಳಲು ಯತ್ನಿಸದೇ ಅಲ್ಲೇ ಬಂದೂಕು ಹಿಡಿದು ಅಲ್ಲೇ ನಿಂತಿದ್ದವನನ್ನುಗಮನಿಸಿದ ಪೊಲೀಸರು ಈತನನ್ನು ಬಂಧಿಸಿದ್ದಾರೆ.

ಎರಡು ಬಾರಿ ಗುಂಡು ಹಾರಿಸಿದ್ದರಿಂದ ಶಿಂಜೋ ಅಬೆ ಅವರು ಗಂಭೀರ ಗಾಯಗೊಂಡಿದ್ದು, ಅವರ ಆರೋಗ್ಯ ಚಿಂತಾಜನಕವಾಗಿದೆ. ಅವರನ್ನು ಉಳಿಸಿಕೊಳ್ಳಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ. (ಏಜೆನ್ಸೀಸ್​)