ನ್ಯೂಸ್

ಮಂಡ್ಯ: ಇಂಡುವಾಳು ಗ್ರಾಮದ ವಿಧಾನ ಪರಿಷತ್​ ಮಾಜಿ ಸದಸ್ಯ ಎಚ್​. ಹೊನ್ನಪ್ಪ ವಿಧಿವಶ

ಮಂಡ್ಯ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ವಿಧಾನ ಪರಿಷತ್​ ಮಾಜಿ ಸದಸ್ಯ ಎಚ್​. ಹೊನ್ನಪ್ಪ ಇಂದು (ಫೆ.15) ಕೊನೆಯುಸಿರೆಳೆದಿದ್ದಾರೆ.

ಮಂಡ್ಯ ತಾಲೂಕಿನ ಇಂಡುವಾಳು ಗ್ರಾಮದವರಾದ ಹೊನ್ನಪ್ಪ, 1998ರಲ್ಲಿ ಜೆಡಿಎಸ್ ನಿಂದ‌ ಸ್ಥಳೀಯ ಸಂಸ್ಥೆಗಳ ಮೂಲಕ ವಿಧಾನ‌ಪರಿಷತ್​ಗೆ ಆಯ್ಕೆಯಾಗಿದ್ದರು. 1998 ರಿಂದ 2004ರ ಎಂಎಲ್ ಸಿ ಆಗಿ ಸೇವೆ ಸಲ್ಲಿಸಿದ್ದಾರೆ. ಬಳಿಕ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದರು.

ಬಿಜೆಪಿ ಜಿಲ್ಲಾಧ್ಯಕ್ಷರಾಗಿಯು ಕರ್ತವ್ಯ ನಿರ್ವಹಿಸಿದ್ದರು. ಇತ್ತೀಚೇಗೆ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಹೊನ್ನಪ್ಪ ಇಂದು ಬೆಳಗಿನ‌ ಜಾವ ಅಸುನೀಗಿದ್ದಾರೆ. ಇಂದು ಸಂಜೆ 4 ಗಂಟೆಗೆ ಹುಟ್ಟೂರು ಇಂಡುವಾಳು ಗ್ರಾಮದಲ್ಲೆ ಅಂತ್ಯ ಸಂಸ್ಕಾರ ನಡೆಯಲಿದೆ. (ದಿಗ್ವಿಜಯ ನ್ಯೂಸ್​)