ನ್ಯೂಸ್

ಪರಿಶಿಷ್ಟರ ಬೇಡಿಕೆ ಇತ್ಯರ್ಥಕ್ಕೆ ಸಿಎಂ ಜತೆ ಚರ್ಚೆ . ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮಹಾಸಂಗಮದಲ್ಲಿ ಸ್ಪೀಕರ್ ಖಾದರ್ ಭರವಸೆ

  • ç

ವಿಜಯವಾಣಿ ಸುದ್ದಿಜಾಲ ಮಂಗಳೂರು
ಪರಿಶಿಷ್ಟರಿಗೆ ಮೀಸಲಿಟ್ಟಿರುವ ಡಿಸಿ ಮನ್ನಾ ಭೂಮಿ ವಿತರಣೆ ಸಹಿತ ಕರಾವಳಿಯ ಪರಿಶಿಷ್ಟ ಜಾತಿ ಮತ್ತು ಪರಿಶಷ್ಟ ಪಂಗಡಗಳ ವಿವಿಧ ಬೇಡಿಕೆಗಳ ಇತ್ಯರ್ಥ ಸಂಬಂಧಿಸಿ ಮುಖ್ಯಮಂತ್ರಿ ಹಾಗೂ ಇಲಾಖೆಗಳ ಸಚಿವರ ಜತೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಭರವಸೆ ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಮಂಗಳೂರು ನೇತೃತ್ವದಲ್ಲಿ ನಗರದ ಅಂಬೇಡ್ಕರ್ ಭವನದಲ್ಲಿ ಭಾನುವಾರ ದ.ಕ.ಮತ್ತು ಉಡುಪಿ ಜಿಲ್ಲೆಗಳ ಸಮಸ್ತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮಹಾಸಂಗಮದಲ್ಲಿ ಸಂಘಟಕರ ವಿವಿಧ ಬೇಡಿಕೆಗಳ ಹಕ್ಕೊತ್ತಾಯ ಸ್ವೀಕರಿಸಿ ಅವರು ಮಾತನಾಡಿದರು.
ಸಮಾವೇಶ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಸಮಾವೇಶದ ಹಕ್ಕೊತ್ತಾಯದ ಬಗ್ಗೆ ಚರ್ಚಿಸಲು ಸಚಿವರು, ರಾಜ್ಯಮಟ್ಟದ ಹಿರಿಯ ಅಧಿಕಾರಿಗಳು ಸಮುದಾಯದ ಸಂಘಟನೆ ಪ್ರತಿನಿಧಿಗಳ ಸಭೆಯನ್ನು ಸ್ಪೀಕರ್ ಜತೆ ಸೇರಿ ಆಯೋಜಿಸುವುದಾಗಿ ಹೇಳಿದರು.
ದ.ಕ.ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಅಧ್ಯಕ್ಷ ಎಂ.ದೇವದಾಸ್ ಅಧ್ಯಕ್ಷತೆ ವಹಿಸಿದ್ದರು. ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಪ್ರಸ್ತಾವನೆಗೈದರು. ಮೂಲ್ಕಿ ಕಾರ್ನಾಡು ಸರ್ಕಾರಿ ಪಪೂ ಕಾಲೇಜು ಪ್ರಾಂ