ಮಂಗಳೂರು: ನಗರದ ವಿವಿಧ ಠಾಣೆಗಳ ವ್ಯಾಪ್ತಿಯಲ್ಲಿ ಗಾಂಜಾ ಸೇವನೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪಾಂಡೇಶ್ವರ ಕಟ್ಟೆ ಎನ್‌ಸಿಸಿ ಬಳಿ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ ಎರ್ನಾಕುಲಂ ಜಿಲ್ಲೆಯ ವಿಲಯತ್ತುನಾಡು ನಿವಾಸಿ ಶ್ರೀ ಹರಿ (24) ಎಂಬವನ್ನು ಪಾಂಡೇಶ್ವರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ತಪಾಸಣೆ ನಡೆಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.
ನೀರುಮಾರ್ಗದ ಕೆಲ್ರಾಯ್ ಬಸ್ಸು ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವನೆ ಮಾಡಿದಂತೆ ಕಂಡು ಬಂದ ತಿರುವನಂತಪುರ ಜಿಲ್ಲೆಯ ಚೆರುಕಯಲ್ಕರ್ ನಿವಾಸಿ ಮೊಹಮ್ಮದ್ ಯೂಸ್ು (21) ಎಂಬಾತನನ್ನು ಮಂಗಳೂರು ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದ್ದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಕೆಂಜಾರು ಗ್ರಾಮದ 313 ಜಂಕ್ಷನ್ ಬಳಿ ಮಾದಕ ವಸ್ತು ಸೇವನೆ ಮಾಡಿದ ಅಮಲಿನಲ್ಲಿದ್ದ ತೋಕೂರು ನಿವಾಸಿ ಉಮ್ಮರ್ ಾರೂಕ್ (40) ಎಂಬಾತನನ್ನು ಬಜಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಪಾಸಣೆಗೆ ಒಳ ಪಡಿಸಿದಾಗ ಮಾದಕ ವಸ್ತು ಸೇವನೆ ದೃಢಪಟ್ಟಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.