ವಿಟ್ಲ: ಮಾಣಿಲ ಶ್ರೀಧಾಮ ಶ್ರೀ ದುರ್ಗಾಮಹಾಲಕ್ಷ್ಮೀ ಕ್ಷೇತ್ರದಲ್ಲಿ ೪೮ ದಿನಗಳ ಸಾಮೂಹಿಕ ಶ್ರೀಲಕ್ಷ್ಮೀ ಪೂಜೆ, ಶ್ರೀ ವರಮಹಾಲಕ್ಷ್ಮೀ ವ್ರತಾಚರಣೆ ಅಂಗವಾಗಿ ಆ.16ರಂದು ಬೆಳ್ಳಿ ಹಬ್ಬ ಸಂಭ್ರಮಕ್ಕೆ ಚಾಲನೆ ಸಿಗಲಿದೆ.
ಸಂಭ್ರಮಕ್ಕೆ ಚಾಲನೆಯನ್ನು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹಗ್ಗಡೆ ನೀಡಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಅರಮನೆಯ ಬಂಗಾರು ಅರಸರು ವಹಿಸಲಿದ್ದಾರೆ. ಮಾಣಿಲ ಶ್ರೀಧಾಮ ಶ್ರೀದುರ್ಗಾಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನ ದಾಸ ಪರಮಹಂಸ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ.
ಶೈಕ್ಷಣಿಕ ಕ್ಷೇತ್ರದ ಡಾ. ಎಂ ಮೋಹನ ಆಳ್ವ, ಕೃಷಿ ಕ್ಷೇತ್ರದ ಮಹಾಲಿಂಗ ನಾಯ್ಕ ಅಮೈ, ಸಂಘಟನೆ ಚಂದ್ರಹಾಸ ಡಿ. ಶೆಟ್ಟಿ ರಂಗೋಲಿ, ಧಾರ್ಮಿಕ ಕ್ಷೇತ್ರ ಜಗನ್ನಾಥ ಚೌಟ ಬದಿಗುಡ್ಡೆ, ವಾಸುದೇವ ಆರ್. ಕೊಟ್ಟಾರಿ, ಬಿ. ಪ್ರೇಮಾನಂದ ಕುಲಾಲ್ ಕೋಡಿಕಲ್, ಆರೋಗ್ಯ ಕ್ಷೇತ್ರ ರೇವತಿ ಡೊಂಬಯ್ಯ ಕುಲಾಲ್ ಪೆರ್ನೆ, ವಿಶೇಷ ಸಾಧನೆಯಾಗಿ ಕೌಶಿಕ್ ಆಚಾರ್ಯ ಬಂಟ್ವಾಳ ಅವರನ್ನು ಸನ್ಮಾನಿಸಲಿದ್ದಾರೆ.