ನವದೆಹಲಿ:ಮಾಜಿ ಪ್ರಧಾನಿ ಮನಮೋಹನ್ ಸಿಂಗ್(Manmohan Singh) ಅವರ ನಿಧನವನ್ನು ವೈಯಕ್ತಿಕ ನಷ್ಟ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ (ಸಿಪಿಪಿ) ಮುಖ್ಯಸ್ಥೆ ಸೋನಿಯಾ ಗಾಂಧಿ ಬಣ್ಣಿಸಿದ್ದಾರೆ.
ಮಾಜಿ ಪ್ರಧಾನಿ ದಿವಂಗತ ಡಾ.ಮನಮೋಹನ್ ಸಿಂಗ್ ಅವರು ಗುರುವಾರ ನಿಧನರಾಗಿದ್ದು, ವಿಶ್ವದಾದ್ಯಂತ ಹಲವು ನಾಯಕರು ಮನಮೋಹನ್ ಅವರಿಗೆ ಸಂತಾಪ ಸೂಚಿಸಿ ಕಂಬನಿ ಮಿಡಿದಿದ್ದಾರೆ. ಮನಮೋಹನ್ ಸಿಂಗ್ ಕುರಿತು ಶುಕ್ರವಾರ ಮಾತನಾಡಿರುವ ಸೋನಿಯಾ ಗಾಂಧಿ, ತಮ್ಮ ಸ್ನೇಹಿತ, ತತ್ವಜ್ಞಾನಿ ಮತ್ತು ಮಾರ್ಗದರ್ಶಕ ಮತ್ತು ಅವರ ನಿಧನದಲ್ಲಿ ಪಕ್ಷವು ಒಬ್ಬ ನಾಯಕನನ್ನು ಕಳೆದುಕೊಂಡಿದೆ ಎಂದು ಹೇಳಿದ್ದಾರೆ.
ಅವರ ವ್ಯಕ್ತಿತ್ವ, ಬುದ್ಧಿವಂತಿಕೆ, ಉದಾತ್ತತೆ ಮತ್ತು ನಮ್ರತೆಯ ಸಾರಾಂಶ ಪ್ರತಿರೂಪಕವಾಗಿದ್ದ ಸಿಂಗ್, ನಮ್ಮ ಜೀವನದಲ್ಲಿ ಎಂದಿಗೂ ತುಂಬಲಾಗದ ಶೂನ್ಯವನ್ನು ಬಿಟ್ಟು ಹೋಗಿದ್ದಾರೆ ಎಂದು ಭಾವುಕರಾಗಿದ್ದಾರೆ.
ಭಾರತದ ಪ್ರಗತಿ ಮತ್ತು ಅಭಿವೃದ್ಧಿಗೆ ಅವರ ಕೊಡುಗೆಗಳು ಅಪಾರವಾಗಿದೆ. ಡಾ.ಮನಮೋಹನ್ ಸಿಂಗ್ ಅವರಂತಹ ನಾಯಕನನ್ನು ನಾವು ಹೊಂದಿದ್ದಕ್ಕಾಗಿ ಕಾಂಗ್ರೆಸ್ ಪಕ್ಷ ಮತ್ತು ಭಾರತದ ಜನರು ಎಂದೆಂದಿಗೂ ಹೆಮ್ಮೆಪಡುತ್ತೇವೆ ಮತ್ತು ಕೃತಜ್ಞರಾಗಿರುತ್ತೇವೆ ಎಂದಿದ್ದಾರೆ,(ಏಜೆನ್ಸೀಸ್).