ಎನ್.ಆರ್.ಪುರ: ಕಾನೂರು ಗ್ರಾಪಂನ 2ನೇ ಅವಧಿಗೆ ಅಧ್ಯಕ್ಷರಾಗಿ ಮನೋಹರ ಹಾಗೂ ಉಪಾಧ್ಯಕ್ಷೆಯಾಗಿ ಮೋಹಿನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಕಾನೂರು ಗ್ರಾಪಂ ಎರಡನೇ ಅವಧಿಗೆ ಸೋಮವಾರ ಗ್ರಾಪಂ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಂಕ್ಸೆ ಗ್ರಾಮದ ಸದಸ್ಯ ಮನೋಹರ್, ಬಿಸಿಎಂ(ಮಹಿಳೆ)ಗೆ ಮೀಸಲಾಗಿದ್ದ ಉಪಾಧ್ಯಕ್ಷೆ ಸ್ಥಾನಕ್ಕೆ ಎಸ್.ಮೋಹಿನಿ ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ರಮೇಶ್ ಅಧ್ಯಕ್ಷ, ಉಪಾಧ್ಯಕ್ಷರ ಅವಿರೋಧ ಆಯ್ಕೆ ಘೋಷಿಸಿದರು. ಈ ಮೂಲಕ ಕಾನೂರು ಗ್ರಾಪಂ ಅಧ್ಯಕ್ಷೆಯಾಗಿದ್ದ ಮೋಹಿನಿ ಈಗ ಉಪಾಧ್ಯಕ್ಷರಾದರು.
ನಂತರ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಬಾಳೆಹೊನ್ನೂರಿನ ಹನ್ೀ ಮಾತನಾಡಿ, ಎಲ್ಲ ಸದಸ್ಯರು ಹೊಂದಾಣಿಕೆಯಿಂದ ಕೆಲಸ ಮಾಡಿ ಅಭಿವೃದ್ಧಿ ನಡೆಸಬೇಕು. ಬಂದ ಅನುದಾನ ಸದ್ಬಳಿಕೆ ಮಾಡಿಕೊಳ್ಳಬೇಕು. ಪಕ್ಷಪಾತ ಮಾಡದೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸಬೇಕು ಎಂದರು.
ಸಂಕ್ಸೆ ಮುಖಂಡ ಮಂಜುನಾಥ್ ಮಾತನಾಡಿ, ಗ್ರಾಮ ಪಂಚಾಯಿತಿಗೆ ಬಂದ ಸೌಲಭ್ಯಗಳು ಗ್ರಾಮದ ಕಟ್ಟ ಕಡೆ ವ್ಯಕ್ತಿಗೂ ತಲುಪಬೇಕು ಎಂದರು. ಮುಖಂಡರಾದ ಹಿರಿಯಣ್ಣಗೌಡ, ಎಂ.ಸಿ.ನಾಗೇಶ್, ಪಿಡಿಒ ಶ್ರೀನಿವಾಸ್, ಕಾರ್ಯದರ್ಶಿ ಲೋಕೇಶ್ ಇದ್ದರು.