ನ್ಯೂಸ್

VIDEO| ಲೇಡಿಸ್​ ಪಿಜಿ ಮುಂಭಾಗ ವ್ಯಕ್ತಿಯ ಅಸಭ್ಯ ವರ್ತನೆ; ಕಠಿಣ ಕ್ರಮಕ್ಕೆ ಆಗ್ರಹಿಸಿದ ಮಹಿಳಾ ಆಯೋಗ

ನವದೆಹಲಿ: ಆಘಾತಕಾರಿ ಘಟನೆ ಒಂದರಲ್ಲಿ ವ್ಯಕ್ತಿಯೋರ್ವ ಲೇಡಿಸ್​ ಪಿಜಿ ಎದುರು ಹಸ್ತಮೈಥುನ ಮಾಡಿಕೊಳ್ಳತ್ತಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಡೆದಿದೆ.

ಘಟನೆಯೂ ಉತ್ತರ ದೆಹಲಿ ಭಾಗದ ಪಿಜಿ ಒಂದರ ಮುಂಭಾಗ ನಡೆದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.

ಘಟನೆಯ ಕುರಿತು ಪ್ರತಿಕ್ರಿಯಿಸಿರುವ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್​ ಲೇಡಿಸ್​ ಪಿಜಿ ಮುಂಭಾಗ ಅಸಭ್ಯವಾಗಿ ವರ್ತಿಸಿದ ಯುವಕನ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ಹೇಗೆ ಓಡಾಡುತ್ತಿದ್ದಾರೆ

ಈ ಕುರಿತು ಟ್ವೀಟ್​ ಮಾಡಿರುವ ಸ್ವಾತಿ ಮಲಿವಾಲ್​ ದೆಹಲಿಯ ಸುತ್ತ ನಡೆಸುತ್ತಿರುವ ಪಿಜಿಗಳಲ್ಲಿ ಸಾವಿರಾರು ಮಹಿಳೆಯರು ವಾಸಿಸುತ್ತಿದ್ದಾರೆ. ಅವರ ಸುರಕ್ಷತೆಯೇ ಅತ್ಯಂತ ನಿರ್ಣಾಯಕವಾಗಿದೆ. ವಿಡಿಯೋದಲ್ಲಿ ಕಾಣುತ್ತಿರುವ ವ್ಯಕ್ತಿಯೂ ಹಲವು ಬಾರಿ ಅಸಭ್ಯವಾಗಿ ವರ್ತಿಸಿದ್ದಾನೆ.

ದೆಹಲಿಯಲ್ಲಿ ಈ ರೀತಿ ಅಪರಾಧಿಗಳು ಹೇಗೆ ಧ್ಯರ್ಯವಾಗಿ ಓಡಾಡುತ್ತಾರೆ. ಪೊಲೀಸರು ಇಂತಹವರ ವಿರುದ್ಧ ಏಕೆ ಕ್ರಮ ಕೈಗೊಳ್ಳುತ್ತಿಲ್ಲ. ಇಂತಹ ಅಪರಾಧಗಳನ್ನು ತಡೆಯಲು ಪೊಲೀಸರು ಆರೋಪಿಗಳ ವಿರುದ್ಧ FIR ದಾಖಲಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಟ್ವೀಟ್​ ಮಾಡಿ ಆಗ್ರಹಿಸಿದ್ದಾರೆ.