Drum : ರಾಜಸ್ಥಾನದ ಅಲ್ವಾರ್‌ನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಡ್ರಮ್‌ನಲ್ಲಿ ವ್ಯಕ್ತಿಯೊಬ್ಬರ ಕೊಳೆತ ಶವ ಪತ್ತೆಯಾಗಿರುವುದು ಭಾರಿ ಸಂಚಲನ ಮೂಡಿಸಿದೆ. ಮನೆ ಮಾಲೀಕರು ಯಾವುದೋ ಒಂದು ಕೆಲಸದ ನಿಮಿತ್ತ ಮೊದಲ ಮಹಡಿಗೆ ಹೋದಾಗ ಅಲ್ಲಿಂದ ದುರ್ವಾಸನೆ ಬರುತ್ತಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದಾಗ ಈ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ.
ತಿಜಾರಾ ಜಿಲ್ಲೆಯ ಆದರ್ಶ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ತನಿಖೆ ಕೈಗೆತ್ತಿಕೊಂಡ ಪೊಲೀಸರು, ಡ್ರಮ್‌ನಲ್ಲಿ ಶವವಾಗಿ ಪತ್ತೆಯಾದ ವ್ಯಕ್ತಿ, ಉತ್ತರ ಪ್ರದೇಶದ ನಿವಾಸಿ. ಆದರೆ, ರಾಜಸ್ಥಾನದ ಅಲ್ವಾರ್‌ನಲ್ಲಿ ಇಟ್ಟಿಗೆ ಗೂಡಿನಲ್ಲಿ ಕೆಲಸ ಮಾಡುತ್ತಿದ್ದ. ಆ ವ್ಯಕ್ತಿಯನ್ನು ಹಂಸರಾಜ್ ಎಂದು ಗುರುತಿಸಲಾಗಿದೆ. ಈ ಘಟನೆಯ ನಂತರ ಅವರ ಪತ್ನಿ ಮತ್ತು ಮೂವರು ಮಕ್ಕಳು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಶವವನ್ನು ನೀಲಿ ಬಣ್ಣದ ಡ್ರಮ್‌ನಲ್ಲಿ ಇಟ್ಟು, ಅದರ ಮೇಲೆ ಮುಚ್ಚಳವನ್ನು ಇರಿಸಿ, ಮೇಲೆ ದೊಡ್ಡ ಕಲ್ಲನ್ನು ಇರಿಸಲಾಗಿತ್ತು.
ಆದರ್ಶ ಕಾಲೋನಿಯ ಮನೆಯಿಂದ ಕೆಟ್ಟ ವಾಸನೆ ಬರುತ್ತಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು. ಪೊಲೀಸ್ ತಂಡ ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದಾಗ ಮನೆಯ ಟೆರೇಸ್‌ನಲ್ಲಿ ನೀಲಿ ಡ್ರಮ್‌ನಲ್ಲಿ ವ್ಯಕ್ತಿಯೊಬ್ಬನ ಶವ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಹಂಸರಾಜ್ ಅಲಿಯಾಸ್ ಸೂರಜ್ ಎಂದು ಗುರುತಿಸಿದ್ದೇವೆ ಎಂದು ಅಲ್ವಾರ್ನ ಉಪ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸಂತ್ರಸ್ತ ಉತ್ತರ ಪ್ರದೇಶದ ನಿವಾಸಿಯಾಗಿದ್ದು, ಒಂದೂವರೆ ತಿಂಗಳ ಹಿಂದೆ ಮನೆ ಬಾಡಿಗೆಗೆ ಪಡೆದಿದ್ದು, ಪತ್ನಿ ಮತ್ತು ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದಾರೆ ಎಂದು ರಾಜೇಶ್ ಕುಮಾರ್ ಹೇಳಿದ್ದಾರೆ.
ವಿಧಿವಿಜ್ಞಾನ ಪ್ರಯೋಗಾಲಯ ತಂಡವು ಘಟನಾ ಸ್ಥಳದಿಂದ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಡ್ರಮ್‌ನಲ್ಲಿ ಶವ ಎಷ್ಟು ಹೊತ್ತು ಇತ್ತು ಮತ್ತು ಅವರ ಕೊಲೆಗೆ ಕಾರಣವೇನೆಂದು ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಕುಟುಂಬ ಸದಸ್ಯರನ್ನು ಪತ್ತೆಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. (ಏಜೆನ್ಸೀಸ್)