ಮುಂಬೈ: ಸೆನ್ಸೇಷನಲ್ ನಟ ಮನ್ಸೂರ್ ಅಲಿ ಖಾನ್ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ, ವೃತ್ತಿಬದುಕಿನ ಆರಂಭದಲ್ಲಿ ಖಳನಟನಾಗಿ ನಟಿಸಿದ್ದ ಅವರು ಇತ್ತೀಚೆಗೆ ಹಾಸ್ಯ ಪಾತ್ರಗಳಲ್ಲಿ ನಟಿಸಿ ವಿಶೇಷ ಇಮೇಜ್ ಗಿಟ್ಟಿಸಿಕೊಂಡಿದ್ದಾರೆ. ಈ ನಡುವೆ ನಾಯಕಿ ತ್ರಿಷಾ ಕುರಿತು ಮಾಡಿದ ಕಾಮೆಂಟ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಚಲನ ಮೂಡಿಸಿದ್ದು, ಟೀಕೆಗೆ ಗುರಿಯಾಗಿದ್ದರು. ಸದ್ಯ ಚುನಾವಣಾ ಪ್ರಚಾರ ಕಾರ್ಯದಲ್ಲಿ ನಿರತರಾಗಿರುವ ಮನ್ಸೂರ್ಗೆ ಎದೆನೋವು ಕಾಣಿಸಿಕೊಂಡು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ.
ತಮಿಳುನಾಡಿನ ವೆಲ್ಲೂರು ಲೋಕಸಭೆ ಕ್ಷೇತ್ರಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮನ್ಸೂರ್ ನಿರಂತರವಾಗಿ ಪ್ರಚಾರದಲ್ಲಿ ತೊಡಗಿದ್ದಾರೆ. ಬಿಸಿಲನ್ನು ಲೆಕ್ಕಿಸದೆ ಚುನಾವಣಾ ಪ್ರಚಾರ ಮುಂದುವರಿಸಿದ್ದ ಅವರು ಏಕಾಎಕಿ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರೊಂದಿಗಿದ್ದ ಸ್ವಯಂಸೇವಕರು ಗುಡಿಯಾತ್ತಂನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ವೈದ್ಯರು ಮನ್ಸೂರ್ ಅವರನ್ನು ಪರೀಕ್ಷಿಸಿ ಚಿಕಿತ್ಸೆ ನೀಡಿದ್ದಾರೆ. ಅವರ ಆರೋಗ್ಯ ಸ್ಥಿತಿ ಇನ್ನಷ್ಟೇ ತಿಳಿಯಬೇಕಿದೆ.
ಕೆಲ ದಿನಗಳಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಮನ್ಸೂರ್ ಇತ್ತೀಚೆಗೆ ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ದನಿಯೆತ್ತಿದ್ದಾರೆ. ತಮ್ಮ ನೆಚ್ಚಿನ ನಾಯಕನಿಗೆ ಏನಾಯಿತು ಎಂದು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆತಂಕಗೊಂಡಿದ್ದಾರೆ.