ನ್ಯೂಸ್

VIDEO | ನೋಡ ನೋಡುತ್ತಿದ್ದಂತೆ ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ!

ಅರಾವಳಿ, ಗುಜರಾತ್​: ರಾಸಾಯನಿಕ ಫ್ಯಾಕ್ಟರಿಯಲ್ಲಿ ದಿಢೀರ್​ ಬೆಂಕಿ ಕಾಣಿಸಿಕೊಂಡಿದ್ದು, ನೋಡ ನೋಡುತ್ತಿದ್ದಂತೆ ಅಗ್ನಿಯ ಕೆನ್ನಾಲಿಗೆಗೆ ಕಾರ್ಖಾನೆ ತುತ್ತಾದ ಘಟನೆ ಗುಜರಾತ್‌ನ ಅರಾವಳಿ ಜಿಲ್ಲೆಯಲ್ಲಿ ವರದಿಯಾಗಿದೆ.

ಕೆಮಿಕಲ್ ಫ್ಯಾಕ್ಟರಿಯಿಂದ ದಟ್ಟ ಹೊಗೆ ಆವರಿಸಿಕೊಂಡ ಕೆಲವೇ ಹೊತ್ತಲ್ಲಿ ಅಗ್ನಿ ಕಾಣಿಸಿಕೊಂಡಿದೆ. ಕಾರ್ಖಾನೆ ಹೊತ್ತಿ ಉರಿಯುತ್ತಿರುವ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿವೆ.

ಸ್ಥಳಕ್ಕೆ ಸುಮಾರು 10 ಅಗ್ನಿಶಾಮಕ ವಾಹನಗಳು ಬಂದಿದ್ದು, ಬೆಂಕಿಯನ್ನು ನಂದಿಸುವ ಕೆಲಸದಲ್ಲಿ ನಿರತಗೊಂಡಿದೆ. ಕೆಮಿಕಲ್ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ರಾಸಾಯನಿಕ ತುಂಬಿದ್ದ 60ಕ್ಕೂ ಹೆಚ್ಚು ಟ್ಯಾಂಕ್‌ಗಳು ಸುಟ್ಟು ಕರಕಲಾಗಿವೆ ಎಂದು ವರದಿ ಉಲ್ಲೇಖಿಸಿದೆ.

ಕೆಮಿಕಲ್​ ಫ್ಯಾಕ್ಟರಿಯ ಅಗ್ನಿ ಅವಘಡದ ಹಿಂದಿರುವ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರವಳ್ಳಿಯ ಶಾಮಲಾಜಿಯಲ್ಲಿರುವ ಅಸಲ್ ಜಿಐಡಿಸಿಯಲ್ಲಿನ ರಾಸಾಯನಿಕ ಕಾರ್ಖಾನೆಯಲ್ಲಿ ಕಾಣಿಸಿಕೊಂಡ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ವರದಿಯಾಗಿದೆ,(ಏಜೆನ್ಸೀಸ್).