ನ್ಯೂಸ್

VIDEO| ಏಷ್ಯಾದ ಅತಿದೊಡ್ಡ ಹಣ್ಣು-ತರಕಾರಿ ಮಾರುಕಟ್ಟೆಯಲ್ಲಿ ಅಗ್ನಿ ಅವಘಡ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯ ಅಜಾದ್​ಪುರ ಮಾರುಕಟ್ಟೆಯಲ್ಲಿ ಶುಕ್ರವಾರ ಸಂಜೆ ಬೆಂಕಿ ಕಾಣಿಸಿಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅತಿದೊಡ್ಡ ತರಕಾರಿ ಮಾರುಕಟ್ಟೆಯಾದ ಆಜಾದ್‌ಪುರ ಮಂಡಿಯಲ್ಲಿ ಶೆಡ್‌ ಉರಿಯುತ್ತಿರುವುದು ವಿಡಿಯೊದಲ್ಲಿ ಕಾಣಿಸುತ್ತದೆ.

ಸಂಜೆ 5:20ರ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದ್ದು, 11ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿವೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಅಗ್ನಿಶಾಮಕ ಠಾಣಾಧಿಕಾರಿ ಪರಸ್ ಕುಮಾರ್ ಮಾರುಕಟ್ಟೆಯ ಗೇಟ್ ನಂ. 1ರ ಬಳಿ ಒರುವ ಟೊಮ್ಯಾಟೋ ಶೆಡ್​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸಂಪೂರ್ಣವಾಗಿ ನಂದಿಸಲಾಗಿದೆ. ಅಗ್ನಿ ಅವಘಡಕ್ಕೆ ಕಾರಣ ತನಿಖೆಯ ನಂತರ ತಿಳಿಯಲಿದೆ. ಆದರೆ, ಪ್ಲಾಸ್ಟಿಕ್ ಪೆಟ್ಟಿಗೆಗೆ ಮೊದಲು ಬೆಂಕಿ ಹತ್ತಿಕೊಂಡಿತು ಎಂದು ಸ್ಥಳದಲ್ಲಿದ್ದವರು ಹೇಳುತ್ತಾರೆ. ಇದಾದ ಬಳಿಕ ಬೆಂಕಿ  ಆವರಿಸಿಕೊಂಡಿದೆ ಎಂದು ತಿಳಿಸಿದ್ದಾರೆ.