ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯು ಮಂಗಳೂರಿನ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜೂನ್.3ರಂದು ಎಂಆರ್‌ಪಿಎಲ್ ಆವರಣದಲ್ಲಿ ಬೃಹತ್ ಸಸಿ ನೆಡುವ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತ್ತು.  
ನ್ಯೂಸ್

ಎಂಆರ್‌ಪಿಎಲ್‌ನಿಂದ ಬೃಹತ್ ಸಸಿ ನೆಡುವ ಅಭಿಯಾನಕ್ಕೆ ಚಾಲನೆ

ಮಂಗಳೂರು: ಮಂಗಳೂರು ರಿಫೈನರಿ ಅಂಡ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್ ಸಂಸ್ಥೆಯು ಮಂಗಳೂರಿನ ಕರ್ನಾಟಕ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಜೂನ್.3ರಂದು ಎಂಆರ್‌ಪಿಎಲ್ ಆವರಣದಲ್ಲಿ ಬೃಹತ್ ಸಸಿ ನೆಡುವ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಿತ್ತು. 2026ರ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಹಾಗೂ ಕೇಂದ್ರ ಸರ್ಕಾರದ ಏಕ್ ಪೇಡ್ ಮಾ ಕೆ ನಾಮ್ (ತಾಯಿಯ ಹೆಸರಿನಲ್ಲಿ ಒಂದು ಸಸಿ) ಅಭಿಯಾನದ ಭಾಗವಾಗಿ ಈ ಪರಿಸರಸ್ನೇಹಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಮಂಗಳೂರು ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಶಿಕಾಂತ್ ಎಸ್. ವಿಭೂತಿ, ಮಂಗಳೂರು ವಲಯದ ವಲಯ ಅರಣ್ಯಾಧಿಕಾರಿ ರಾಜೇಶ್ ಬಾಳಿಗರ್, ಸುರತ್ಕಲ್ ವಿಭಾಗದ ಉಪ ವಲಯ ಅರಣ್ಯಾಧಿಕಾರಿ ಶ್ರವಣ್ ಕುಮಾರ್ ನಲವಾಡ್ ಹಾಗೂ ಸುರತ್ಕಲ್ ಬೀಟ್‌ನ ಅರಣ್ಯ ರಕ್ಷಕ ಗಂಗಾಧರ್ ನಾವಿ. ಎಂಆರ್‌ಪಿಎಲ್ ವ್ಯವಸ್ಥಾಪಕ ನಿರ್ದೇಶಕ ಮುಂಡ್ಕೂರು ಶ್ಯಾಮ್‌ಪ್ರಸಾದ್ ಕಾಮತ್, ನಿರ್ದೇಶಕ ನಂದಕುಮಾರ್ ವೇಲಾಯುಧನ್ ಪಿಳ್ಳೈ, ಸಿಎಫ್‌ಒ ದೇವೇಂದ್ರ ಕುಮಾರ್, ಕಾರ್ಯನಿರ್ವಾಹಕ ನಿರ್ದೇಶಕ ಎನ್. ಆನಂದ ಕುಮಾರ್, ದೀಪಕ್ ಪ್ರಭಾಕರ್ ಪಿ., ಪಿ. ಸುಜಿತ್ ಅವರು ಉಪಸ್ಥಿತರಿದ್ದು ಸಸಿಗಳನ್ನು ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.