ನ್ಯೂಸ್

ಮಠ ಖ್ಯಾತಿಯ ನಿರ್ದೇಶಕ Guruprasad​ ಆತ್ಮಹತ್ಯೆಗೆ ಶರಣು

Webdesk - Manjunatha B

ಬೆಂಗಳೂರು: ಮಠ, ಎದ್ದೇಳು ಮಂಜುನಾಥ ಸಿನಿಮಾವನ್ನು ನಿರ್ದೇಶಿಸಿ ಸ್ಯಾಂಡಲ್​ವುಡ್​ನ;ಲ್ಲಿ ತಮ್ಮದೇ ಆದ ಅಭಿಮಾನಿ ಬಳಗವನ್ನು ಹೊಂದಿದ್ದ ನಿರ್ದೇಶಕ ಗುರುಪ್ರಸಾದ್​ (Guruprasad) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬೆಂಗಳೂರು ಹೊರವಲದ ಮಾದಾವರದ ಅಪಾರ್ಟ್​ಮೆಂಟ್​ ಒಂದರಲ್ಲಿ ವಾಸವಿದ್ದ ಗುರುಪ್ರಸಾದ್​ ಅವರು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿಚಾರ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮಾದನಾಯಕನಹಳ್ಳಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೆಲ ತಿಂಗಳ ಹಿಂದಷ್ಟೇ ಇವರ ನಿರ್ದೇಶನದ ರಂಗನಾಯಕ ಚಿತ್ರ ರಿಲೀಸ್​ ಆಗಿತ್ತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆ ಪಡೆದಿದ್ದ ಈ ಚಿತ್ರವು ಬಾಕ್ಸ್​ಆಫೀಸ್​ನಲ್ಲಿ ಹೀನಾಯವಾಗಿ ಸೋಲುಂಡಿತ್ತು. ಸಾಲಬಾಧೆ ತಾಳಲಾರದೆ ಗುರುಪ್ರಸಾದ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದು, ಈ ಬಗ್ಗೆ ಇನ್ನಷ್ಟೇ ಅಧಿಕೃತವಾಗಬೇಕಿದೆ.