ಸಿವಾನ್: ಧರ್ಮಗುರುವೊಬ್ಬ ವಿದ್ಯಾರ್ಥಿನಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಪ್ರಕರಣ ಬೆಳಕಿಗೆ ಬಂದಿದ್ದು, ಈ ಘಟನೆಯ ವೀಡಿಯೋ ಕೂಡ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: ಪ್ರೇಮಿಗಾಗಿ ಪಾಕಿಸ್ತಾನಕ್ಕೆ ಹೊರಟಿದ್ದ ಬಾಲಕಿ: ವಿಮಾನ ನಿಲ್ದಾಣದಲ್ಲಿ ಏನು, ಹೇಗೆ ಮಾತನಾಡಬೇಕು ಎಂದು ಹೇಳಿಕೊಟ್ಟಿದ್ದ ಯುವಕ..
ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಿಡಿಯೋದಲ್ಲಿ ಮೂವತ್ತರ ಪ್ರಾಯದ ಧರ್ಮಗುರು ಶಾಲಾ ಸಮವಸ್ತ್ರವನ್ನು ಧರಿಸಿರುವ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ. ಕಳೆದ ಹಲವು ದಿನಗಳಿಂದ ವಿದ್ಯಾರ್ಥಿನಿಯೊಂದಿಗೆ ಆತ ಇಂತಹ ಚಟುವಟಿಕೆಗಳನ್ನು ಮಾಡುತ್ತಿದ್ದ ಎನ್ನಲಾಗಿದೆ.
ಘಟನೆಯ ನಿಖರವಾದ ಸಮಯ ತಿಳಿದು ಬಂದಿಲ್ಲವಾದರೂ ಕಿಟಕಿಯಿಂದ ನೋಡುತ್ತಿರುವ ವ್ಯಕ್ತಿ ಇದನ್ನೆಲ್ಲ ರೆಕಾರ್ಡ್ ಮಾಡಿದ್ದಾನೆ. ಸ್ಥಳೀಯ ವರದಿಗಳ ಪ್ರಕಾರ, ಅಂದರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪೀರ್ ಬಾಬಾನ ಸಮಾಧಿಯಲ್ಲಿ ಮೌಲ್ವಿಯೊಬ್ಬರು ಭೂತೋಚ್ಚಾಟನೆಯ ಆಚರಣೆಗಳನ್ನು ನಡೆಸುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳ ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಇಲ್ಲಿ ಭೇಟಿ ನೀಡಿದ್ದಾರೆ ಎನ್ನಲಾಗಿದೆ.
ಮುಜಾಫರ್ಪುರನ ನಿವಾಸಿಯಾಗಿರುವ ಎಂದು ಗುರುತಿಸಲಾದ ಆರೋಪಿಯು ವಿದ್ಯಾರ್ಥಿನಿಯೊಂದಿಗೆ ಹಲವಾರು ದಿನಗಳಿಂದ ಅಶ್ಲೀಲ ಕೃತ್ಯಗಳನ್ನು ಎಸಗುತ್ತಿದ್ದ ಎನ್ನಲಾಗಿದೆ. ಈ ಘಟನೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಜನರು ಹಂಚಿಕೊಂಡಿದ್ದಾರೆ. ವೈರಲ್ ಆಗಿರುವ ವಿಡಿಯೋ ಗ್ರಾಮ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ಸಂಚಲನ ಮೂಡಿಸಿದೆ. ಅಂದರ್ ಪೊಲೀಸ್ ಠಾಣೆಯ ಅಧಿಕಾರಿ ಕುಮಾರ್ ವೈಭವ್, ಸದ್ಯ ಪ್ರಕರಣದ ತನಿಖೆ ನಡೆಯುತ್ತಿದೆ. ಆರೋಪಿಯ ಕೃತ್ಯ ವೈರಲ್ ಆದ ಬೆನ್ನಲ್ಲೇ ಆತ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದಿದ್ದಾರೆ.(ಏಜೆನ್ಸೀಸ್)